ಉಡುಪಿ: ರೇಖಾ ಗುಪ್ತಾ ಅವರು ದೆಹಲಿಯ ನಾಲ್ಕನೇ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನವನ್ನು ಸ್ವೀಕರಿಸಿರುವ ಬಗ್ಗೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಅಧ್ಯಕ್ಷೆ ಸಂಧ್ಯಾ ರಮೇಶ್ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಪಟಾಕಿಯನ್ನು ಸಿಡಿಸಿ, ಸಿಹಿಯನ್ನು ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಮಾತನಾಡಿ, ಸುಧೀರ್ಘ 27 ವರ್ಷಗಳ ಬಳಿಕ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೊದಲ ಬಾರಿ ಸ್ಪರ್ಧಿಸಿ ಗೆಲುವು ಸಾಧಿಸಿದ ಮಹಿಳಾ ಶಾಸಕಿ ರೇಖಾ ಗುಪ್ತಾ ಅವರನ್ನು ರಾಷ್ಟ್ರ ರಾಜಧಾನಿಯ ಗದ್ದುಗೆಗೆ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಿರುವುದು ಸಂತಸ ತಂದಿದೆ. ದೆಹಲಿಯ ಮುಖ್ಯಮಂತ್ರಿ ಗಾದಿಗೆ ಅನೇಕ ಮಂದಿ ಘಟಾನುಘಟಿ ಶಾಸಕರು ಸಮರ್ಥರಾಗಿದ್ದರೂ, ಪಕ್ಷದ ಓರ್ವ ನೂತನ ಮಹಿಳಾ ಶಾಸಕಿಗೆ ದೆಹಲಿಯ ಆಡಳಿತದ ಚುಕ್ಕಾಣಿಯನ್ನು ಹಿಡಿಯುವ ಅವಕಾಶವನ್ನು ನೀಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಪಕ್ಷದ ಪ್ರಮುಖರಿಗೆ ಅಭಿನಂದನೆಗಳು ಎಂದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭಾ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳಾದ ಸುಜಾಲಾ ಸತೀಶ್, ತಾರಾ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…