ನವದೆಹಲಿ: ದೆಹಲಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಧ್ಯರಾತ್ರಿವರೆಗೆ ಎಲ್ಲಾ ಇಂಡಿಗೋ ದೇಶೀಯ ವಿಮಾನಗಳ ಹಾರಾಟವನ್ನ ಸಂಪೂರ್ಣ ರದ್ದುಗೊಳಿಸಿರುವುದಾಗಿ ಇಂಡಿಗೋ ಸಂಸ್ಥೆ ತಿಳಿಸಿದೆ.
ಇಂಡಿಗೋದಲ್ಲಿ ಉಂಟಾಗಿರುವ ಅಡಚಣೆ ಸತತ 5ನೇ ದಿನಕ್ಕೆ ಮುಂದುವೆರದಿದ್ದು, ಸಿಬ್ಬಂದಿ ರೋಸ್ಟರಿಂಗ್ ನಿಯಮಗಳು, ತಾಂತ್ರಿಕ ಸಮಸ್ಯೆ ಹಾಗೂ ಕಾರ್ಯಾಚರಣೆ ದೋಷಗಳಿಂದ ಇಂದು ಕೂಡ ನೂರಾರು ವಿಮಾನಗಳ ರದ್ದುಗೊಳಿಸಲಾಗಿದೆ. ಏಕಾಏಕಿ ವಿಮಾನ ರದ್ದಾದ ವಿಷಯ ತಿಳಿದ ಪ್ರಯಾಣಿಕರು ಭಾರೀ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಪ್ರಯಾಣಿಕರು ಹಾಗೂ ಏರ್‌ಪೋರ್ಟ್ ಸಿಬ್ಬಂದಿ ನಡುವೆ ವಾಗ್ವಾದ ನಡೆದಿದೆ.
ದೆಹಲಿ ಏರ್‌ಪೋರ್ಟ್‌ನ ಟರ್ಮಿನಲ್‌ಗಳಲ್ಲಿ ಜನದಟ್ಟಣೆ ನಿಯಂತ್ರಿಸಲು ಈ ನಿರ್ಧಾರ ತೆಗೆದುಕೊಳ್ಳಲಾವಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಮಧ್ಯರಾತ್ರಿ 11:59ರ ವರೆಗೆ ಎಲ್ಲಾ ಇಂಡಿಗೋ ದೇಶಿಯ ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ. ಅದಕ್ಕೆ ಮುಂಚಿತವಾಗಿ ಇಲ್ಲಿಂದ ನಿರ್ಗಮಿಸಬೇಕಿರುವ ಪ್ರಯಾಣಿಕರು ಏರ್‌ಪೋರ್ಟ್‌ಗೆ ಬಾರದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಇಂಡಿಗೋ ಶುಕ್ರವಾರ ಒಂದೇ ದಿನ ಬೆಂಗಳೂರು, ದೆಹಲಿ, ಹೈದರಾಬಾದ್ ಹಾಗೂ ಇತರ ಏರ್‌ಪೋರ್ಟ್‌ಗಳಿಂದ ಒಟ್ಟು 700 ವಿಮಾನಗಳ ಹಾರಾಟವನ್ನ ರದ್ದುಗೊಳಿಸಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…