Featured

ದೆಹಲಿಯಲ್ಲಿ ಏರಿಕೆಯಾಗುತ್ತಿರುವ ಕೊರೊನಾ ಪ್ರಕರಣ : ಮತ್ತೆ ಮಾಸ್ಕ್‌ ಕಡ್ಡಾಯ, ತಪ್ಪಿದರೆ  ₹500 ದಂಡ – Vishwanews24

ದೆಹಲಿಯಲ್ಲಿ ಏರಿಕೆಯಾಗುತ್ತಿರುವ ಕೊರೊನಾ ಪ್ರಕರಣ : ಮತ್ತೆ ಮಾಸ್ಕ್‌ ಕಡ್ಡಾಯ, ತಪ್ಪಿದರೆ  ₹500 ದಂಡ

ನವದೆಹಲಿ: ಕೊರೊನಾ ವೈರಸ್‌ ಸೋಂಕು ಪ್ರಕರಣಗಳು ಮತ್ತೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸುವುದನ್ನು ದೆಹಲಿ ಸರ್ಕಾರ ಕಡ್ಡಾಯಗೊಳಿಸಿದೆ. ನಿಯಮ ಉಲ್ಲಂಘಿಸಿದರೆ ₹500 ದಂಡ ವಿಧಿಸುವಂತೆ ಸರ್ಕಾರ ಬುಧವಾರ ಸೂಚಿಸಿದೆ.

ಮಕ್ಕಳಲ್ಲಿಯೂ ಸೋಂಕು ಹೆಚ್ಚಿದ್ದು ಶಾಲೆಗಳನ್ನು ಮುಚ್ಚುವ ಬಗ್ಗೆ ಚರ್ಚೆ ನಡೆಸಲಾಗಿದೆ. ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು ಶಾಲೆಗಳನ್ನು ನಡೆಸುವ ಬಗ್ಗೆ ಪ್ರತ್ಯೇಕ ಮಾರ್ಗಸೂಚಿ ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದ್ದು, ಶಾಲೆ ಮುಚ್ಚುವ ನಿರ್ಧಾರದಿಂದ ಹಿಂದೆ ಸರಿದಿದೆ.

ಕಡ್ಡಾಯವಾಗಿ ಮಾಸ್ಕ್‌ ಬಳಕೆಗೆ ಸಂಬಂಧಿಸಿದಂತೆ ಸರ್ಕಾರವು ಇನ್ನಷ್ಟೇ ಅಧಿಕೃತ ಆದೇಶ ಹೊರಡಿಸಬೇಕಿದೆ. ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್‌ ಪರೀಕ್ಷೆ ಹೆಚ್ಚಿಸುವುದು ಹಾಗೂ ಹೆಚ್ಚಿನ ಜನ ಸೇರುವ ಕಡೆ ನಿಗಾವಹಿಸುವಂತೆ ಸೂಚಿಸಲಾಗಿದೆ.

ಮಂಗಳವಾರ ದೆಹಲಿಯಲ್ಲಿ ಕೋವಿಡ್‌-19 ಹೊಸ ಪ್ರಕರಣಗಳ ಸಂಖ್ಯೆ ಶೇಕಡ 26ರಷ್ಟು ಏರಿಕೆಯಾಗಿದೆ. ಬುಧವಾರ 632 ಹೊಸ ಪ್ರಕರಣಗಳು ವರದಿಯಾಗಿವೆ ಹಾಗೂ ಕೋವಿಡ್‌ ಪಾಸಿಟಿವಿಟಿ ದರ ಶೇಕಡ 4.42ರಷ್ಟಿದೆ. ಸೋಮವಾರ ದೆಹಲಿಯಲ್ಲಿ 501 ಪ್ರಕರಣಗಳು ದಾಖಲಾಗಿದ್ದವು ಹಾಗೂ ಪಾಸಿಟಿವಿಟಿ ದರ ಶೇಕಡ 7.72ರಷ್ಟಿತ್ತು.

ಬುಧವಾರ ಬೆಳಗ್ಗಿನವರೆಗೂ 24 ಗಂಟೆಗಳ ಅಂತರದಲ್ಲಿ ದೇಶದಲ್ಲಿ 2,067 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 12,340ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಇದೇ ಅವಧಿಯಲ್ಲಿ 40 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

4 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

4 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

5 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

6 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

6 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

6 hours ago