Featured

ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಳ : ವಾಯು ಸೂಚ್ಯಂಕ 362 ಏರಿಕೆ – Vishwanews24

ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಳ : ವಾಯು ಸೂಚ್ಯಂಕ 362 ಏರಿಕೆ – Vishwanews24

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೆಲದಿನಗಳಿಂದ ವಾಯು ಮಾಲಿನ್ಯ ಹೆಚ್ಚಳವಾಗುತ್ತಿದೆ. ಇಂದು ಬೆಳಗ್ಗೆ ದೆಹಲಿಯ ವಾಯು ಸೂಚ್ಯಂಕ ಪರೀಕ್ಷಿಸಿದಾಗ 362 ಕಂಡುಬಂದಿದೆ.

ದೆಹಲಿಯಲ್ಲಿ ಗಾಳಿಯ ಗುಣಮಟ್ಟದಲ್ಲಿ ತೀವ್ರ ಕುಸಿತ ಕಂಡುಬಂದಿದ್ದು, ಈ ಗಾಳಿ ಉಸಿರಾಟಕ್ಕೆ ಅನರ್ಹವಾಗಿದೆ. ಇಂದು ಬೆಳಿಗ್ಗೆ ದೆಹಲಿ ವಾಯು ಸೂಚ್ಯಂಕ 362 ಕಂಡು ಬಂದಿದೆ. ವಾಯು ಸೂಚ್ಯಂಕ 200ಕ್ಕಿಂತ ಹೆಚ್ಚು ಇದ್ದರೆ ಉಸಿರಾಡಲು ಅನರ್ಹವಾಗಿರುತ್ತದೆ. ಹಾಗಾಗಿ ಇದೀಗ ದೆಹಲಿ ಜನ ವಾಯು ಮಾಲಿನ್ಯದಿಂದಾಗಿ ಮನೆಯಿಂದ ಹೊರ ಬರದಿರುವ ಸ್ಥಿತಿ ನಿರ್ಮಾಣವಾಗಿದೆ.

ವಾಯು ಮಾಲಿನ್ಯ ತಡೆಗಾಗಿ ನಿನ್ನೆ ಕೇಂದ್ರ ಸರ್ಕಾರ ನೇತೃತ್ವದಲ್ಲಿ ದೆಹಲಿ ಸುತ್ತಮುತ್ತಲಿನ 4 ರಾಜ್ಯಗಳ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ವಾಯು ಗುಣಮಟ್ಟ ಆಯೋಗದ ಸೂಚನೆಯಂತೆ ದೆಹಲಿ ಹಾಗೂ ಸುತ್ತಮುತ್ತಲಿನ ವಲಯದಲ್ಲಿ ಮಾಲಿನ್ಯಕಾರಕ ಇಂಧನ ಬಳಕೆ ಉದ್ದಿಮೆಗಳು ಕಾರ್ಯ ನಿರ್ವಹಿಸಕೂಡದು ಎನ್ನಲಾಗಿದೆ. 11 ಉಷ್ಣವಿದ್ಯುತ್ ಸ್ಥಾವರಗಳ ಪೈಕಿ 5 ಮಾತ್ರ ನವೆಂಬರ್ 30 ರವರೆಗೆ ಕೆಲಸ ಮಾಡಬೇಕು. ನವೆಂಬರ್ 31 ರವರೆಗೆ ಅಗತ್ಯವಸ್ತು ಸಾಗಾಣೆ ಟ್ರಕ್ ಹೊರತುಪಡಿಸಿ ಉಳಿದ ಟ್ರಕ್‍ಗಳ ಪ್ರವೇಶ ನಿಷೇಧ ಮಾಡಲಾಗಿದೆ.

ಇದರೊಂದಿಗೆ 10 ವರ್ಷಕ್ಕಿಂತ ಹಳೆಯ ಪೆಟ್ರೋಲ್ 15 ವರ್ಷಕ್ಕಿಂತ ಹಳೆ ಡೀಸೆಲ್ ವಾಹನ ನವೆಂಬರ್ 21 ರವರೆಗೆ ಸಂಚಾರ ಮಾಡಬಾರದು. ನವೆಂಬರ್ 21 ರವರೆಗೆ ವರ್ಕ್ ಫ್ರಂ ಹೋಮ್‍ಗೆ ಆದ್ಯತೆ ಕೊಡಿ ಎಂದು ಸೂಚಿಸಿದ್ದು, ಕಚೇರಿಗಳಲ್ಲಿ ಶೇ.50ರಷ್ಟು ಸಿಬ್ಬಂದಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ. ಇದಲ್ಲದೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಮುಂದಿನ ಆದೇಶದವರೆಗೆ ರಜೆ ನೀಡಲಾಗಿದೆ.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

10 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

10 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

11 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

11 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago