Featured

ದೆಹಲಿಯಲ್ಲಿ 2021ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಧಾನ ಸಮಾರಂಭ ; 119 ಮಂದಿಗೆ ಪದ್ಮಶ್ರೀ ಗೌರವ – Vishwanews24

ದೆಹಲಿಯಲ್ಲಿ 2021ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಧಾನ ಸಮಾರಂಭ ; 119 ಮಂದಿಗೆ ಪದ್ಮಶ್ರೀ ಗೌರವ – Vishwanews24

ನವದೆಹಲಿ: ಅಕ್ಷರ ಸಂತ ಹರೇಕಳ ಹಾಜಬ್ಬ ಸೇರಿದಂತೆ ಇಂದು 119 ಜನರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ ’ಪದ್ಮ’ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. 7 ಪದ್ಮವಿಭೂಷಣ, 10 ಪದ್ಮಭೂಷಣ, 102 ಪದ್ಮಶ್ರೀ ಪ್ರಶಸ್ತಿಗಳನ್ನು ನೀಡಲಾಗಿದೆ. ಪ್ರಶಸ್ತಿ ಪಡೆದವರಲ್ಲಿ 29 ಮಹಿಳೆಯರು, ಒಬ್ಬರು ತೃತೀಯ ಲಿಂಗಿ ಸೇರಿದ್ದಾರೆ.

ಜಾನಪದ ಕಲಾ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆ ಮಾಡಿರುವ ಮಂಜಮ್ಮ ಜೋಗತಿ, ಮಂಗಳೂರಿನ ಪೊಸಪಡ್ಪು ಎಂಬ ಕುಗ್ರಾಮದಲ್ಲಿ ಶಾಲೆ ನಿರ್ಮಾಣ ಮಾಡಿ, ಶಿಕ್ಷಣ ಕ್ಷೇತ್ರದಲ್ಲಿ ಸಂಚಲನ ಸೃಷ್ಟಿಸಿದ ಹರೇಕಳ ಹಾಜಬ್ಬ,ವೃಕ್ಷಮಾತೆ’ ಎಂದೇ ಖ್ಯಾತಿಯಾಗಿರುವ, 80ರ ಆಸುಪಾಸಿನ ತುಳಸಿ ಗೋವಿಂದ ಗೌಡ, ಸೇರಿದಂತೆ ರಾಜ್ಯದ ಎಂಟು ಮಂದಿ ಪದ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಪೇಜಾವರ ಶ್ರೀ, ಡಾ. ಬಿ. ಎಂ. ಹೆಗ್ಡೆ, ಜಪಾನ್ನ ಮಾಜಿ ಪ್ರಧಾನಿ ಶಿಂಬೊ ಅಬೆ, ಗಾಯಕ ಎಸ್. ಪಿ. ಬಾಲಸುಬ್ರಮಣ್ಯಂ (ಮರಣೋತ್ತರ), ನರಿಂದರ್ ಸಿಂಗ್ ಕಪಾನಿ (ಮರಣೋತ್ತರ), ಮೌಲಾನಾ ವಹೀದುದ್ದೀನ್ ಖಾನ್, ಬಿ. ಬಿ. ಲಾಲ್, ಸುದರ್ಶನ್ ಸಾಹೋ ಪದ್ಮವಿಭೂಷಣ ಪ್ರಶಸ್ತಿ ಪಡೆದಿದ್ದಾರೆ.

ಕೃಷ್ಣನ್ ನಾಯರ್ ಶಾಂತಾ ಕುಮಾರಿ ಚಿತ್ರಾ, ತರುಣ್ ಗೊಗಯ್ (ಮರಣೋತ್ತರ), ಚಂದ್ರ ಶೇಖರ ಕಂಬಾರ, ಸುಮಿತ್ರಾ ಮಹಾಜನ್, ನೃಪೇಂದ್ರ ಮಿಶ್ರಾ, ರಾಮ್ ವಿಲಾಸ್ ಪಾಸ್ವಾನ್ (ಮರಣೋತ್ತರ), ಕೇಶುಭಾಯ್ ಪಟೇಲ್ (ಮರಣೋತ್ತರ), ಕಲ್ಬೆ ಸಾದಿಕ್ (ಮರಣೋತ್ತರ), ರಜನಿಕಾಂತ್ ದೇವಿದಾಸ್ ಶ್ರಾಫ್, ತರ್ಲೋಚನ್ ಸಿಂಗ್ ಪದ್ಮಭೂಷಣ ಪ್ರಶಸ್ತಿ ಪಡೆದಿದ್ದಾರೆ. ಸಿನಿ ರಂಗದಲ್ಲಿ ಕಂಗನಾ ರಣಾವತ್, ಕರಣ್ ಜೋಹರ್ ಅವರಿಗೂ ಪದ್ಮಶ್ರೀ ದೊರೆತಿದೆ.

ರಾಜ್ಯದ 8 ಸಾಧಕರಿಗೆ ಪದ್ಮಶ್ರೀ, ಪೇಜಾವರ ಶ್ರೀಗಳಿಗೆ ಪದ್ಮ ವಿಭೂಷಣ
ಪದ್ಮವಿಭೂಷಣ ಪ್ರಶಸ್ತಿ ಜಪಾನ್‌ನ ಮಾಜಿ ಪ್ರಧಾನಿ ಶಿಂಬೊ ಅಬೆ, ಕರ್ನಾಟಕದ ಡಾ. ಬಿ. ಎಂ. ಹೆಗ್ಡೆ, ಗಾಯಕ ಎಸ್‌. ಪಿ. ಬಾಲಸುಬ್ರಮಣ್ಯಂ (ಮರಣೋತ್ತರ), ನರಿಂದರ್ ಸಿಂಗ್ ಕಪಾನಿ (ಮರಣೋತ್ತರ), ಮೌಲಾನಾ ವಹೀದುದ್ದೀನ್ ಖಾನ್, ಬಿ. ಬಿ. ಲಾಲ್, ಸುದರ್ಶನ್ ಸಾಹೋ ಪದ್ಮವಿಭೂಷಣ ಪ್ರಶಸ್ತಿ ಪಡೆದ ಸಾಧಕರು.

ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಗೌರವ
ಪದ್ಮಭೂಷಣ ಕೃಷ್ಣನ್ ನಾಯರ್ ಶಾಂತಾ ಕುಮಾರಿ ಚಿತ್ರಾ, ತರುಣ್ ಗೊಗಯ್ (ಮರಣೋತ್ತರ), ಚಂದ್ರ ಶೇಖರ ಕಂಬಾರ, ಸುಮಿತ್ರಾ ಮಹಾಜನ್, ನೃಪೇಂದ್ರ ಮಿಶ್ರಾ, ರಾಮ್ ವಿಲಾಸ್ ಪಾಸ್ವಾನ್ (ಮರಣೋತ್ತರ), ಕೇಶುಭಾಯ್ ಪಟೇಲ್ (ಮರಣೋತ್ತರ), ಕಲ್ಬೆ ಸಾದಿಕ್ (ಮರಣೋತ್ತರ), ರಜನಿಕಾಂತ್ ದೇವಿದಾಸ್ ಶ್ರಾಫ್, ತರ್‌ಲೋಚನ್ ಸಿಂಗ್ ಪದ್ಮಭೂಷಣ ಪ್ರಶಸ್ತಿ ಪಡೆದವರು.

ಪದ್ಮಶ್ರೀ ಪ್ರಶಸ್ತಿ ಪಡೆದ ಕನ್ನಡಿಗರು 102 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತಿದೆ. ಕರ್ನಾಟಕದ ಮಾತಾ ಬಿ. ಮಂಜಮ್ಮ ಜೋಗತಿ (ಕಲೆ), ರಂಗಸ್ವಾಮಿ ಲಕ್ಷ್ಮಿನಾರಾಯಣ ಕಶ್ಯಪ್ (ಸಾಹಿತ್ಯ ಮತ್ತು ಶಿಕ್ಷಣ), ಕೆ. ವೈ. ವೆಂಕಟೇಶ್ (ಕ್ರೀಡೆ) ಪದ್ಮಶ್ರೀ ಪ್ರಶಸ್ತಿ ಪಡೆದ ಸಾಧಕರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

8 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

8 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

8 hours ago