ನವದೆಹಲಿ: ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್-1ರ ಮೇಲ್ಚಾವಣಿಯ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಟ್ಯಾಕ್ಸಿ ಹಾಗೂ ಕಾರುಗಳು ಜಖಂಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ. ಈ ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದು, ಈ ಪೈಕಿ ಓರ್ವ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಜಖಂಗೊಂಡಿರುವ ವಾಹನಗಳಲ್ಲಿ ಜನ ಸಿಲುಕಿಕೊಂಡಿರುವ ಶಂಕೆ ಹಿನ್ನೆಲೆಯಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಟರ್ಮಿನಲ್‌ನ ಪಿಕ್-ಅಪ್ ಮತ್ತು ಡ್ರಾಪ್ ಪ್ರದೇಶದಲ್ಲಿ ನಿಲ್ಲಿಸಿದ ಕಾರುಗಳಿಗೆ ಹಾನಿಯಾಗಿದೆ. ಘಟನೆ ನಡೆದ ಕೂಡಲೇ ಮೂರು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಯಿತು. ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ದೆಹಲಿ ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ಕಿಂಜರಾಪು ಅವರು, ಸದ್ಯ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳದಲ್ಲಿದ್ದು, ಘಟನೆಯ ಬಗ್ಗೆ ನಿಗಾವಹಿಸಿದ್ದಾರೆ. ಘಟನೆಯ ಕುರಿತು ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸಂಕಷ್ಟದಲ್ಲಿ ಸಿಲುಕಿರುವ ಪ್ರಯಾಣಿಕರಿಗೆ ಸಹಾಯ ಮಾಡಲು ವಿಮಾನಯಾನ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ ಎಂದು ಹೇಳಿದ್ದಾರೆ.
ಮೇಲ್ಚಾವಣಿ ಕುಸಿತದಿಂದ ಟ್ಯಾಕ್ಸಿ ಸೇರಿದಂತೆ ಹಲವು ವಾಹನಗಳು ಜಖಂಗೊಂಡಿದೆ. ಘಟನೆಯ ಪರಿಣಾಮ ಟರ್ಮಿನಲ್ 1 ರಿಂದ ಎಲ್ಲಾ ನಿರ್ಗಮನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಸುರಕ್ಷತಾ ಕ್ರಮವಾಗಿ ಚೆಕ್-ಇನ್ ಕೌಂಟರ್‌ಗಳನ್ನು ಮುಚ್ಚಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…