Featured

ದೆಹಲಿ ಕಾರ್‌  ಸ್ಫೋಟ ಪ್ರಕರಣ: ಶಂಕಿತ ಆತ್ಮಾಹುತಿ ಬಾಂಬರ್‌ ಚಿತ್ರ ಬಹಿರಂಗ – vishwanews24

ದೆಹಲಿ ಕಾರ್‌  ಸ್ಫೋಟ ಪ್ರಕರಣ: ಶಂಕಿತ ಆತ್ಮಾಹುತಿ ಬಾಂಬರ್‌ ಚಿತ್ರ ಬಹಿರಂಗ

ನವದೆಹಲಿ: ದೆಹಲಿಯ ಕೆಂಪು ಕೋಟೆ ಕಾರು ಸ್ಫೋಟ ಪ್ರಕರಣದ ಆತ್ಮಹತ್ಯಾ ಬಾಂಬರ್ ಎಂದು ಶಂಕಿಸಲಾಗಿರುವ ಡಾ. ಉಮರ್ ಮೊಹಮ್ಮದ್ ಎಂಬಾತನ ಮೊದಲ ಚಿತ್ರ ಇದೀಗ ಬಹಿರಂಗಗೊಂಡಿದೆ.

ದೆಹಲಿಯ ಕೆಂಪು ಕೋಟೆ ಕಾರು ಸ್ಫೋಟದಲ್ಲಿ ಭಾಗಿಯಾಗಿರುವ ಹುಂಡೈ ಐ20 ಕಾರನ್ನು ಸ್ಫೋಟಕ್ಕೂ ಮುನ್ನ ಮಸೀದಿಯೊಂದರ ಬಳಿ ಮೂರು ಗಂಟೆಗಳ ಕಾಲ ಪಾರ್ಕಿಂಗ್ ಮಾಡಲಾಗಿತ್ತು. ಕಾರು ಸುನೇಹ್ರಿ ಮಸೀದಿ ಪಾರ್ಕಿಂಗ್ ಸ್ಥಳಕ್ಕೆ ಮಧ್ಯಾಹ್ನ 3:19 ಕ್ಕೆ ಪ್ರವೇಶಿಸಿ ಸಂಜೆ 6:48ಕ್ಕೆ ನಿರ್ಗಮಿಸಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬಂದಿದೆ.

ಪಾರ್ಕಿಂಗ್ ಸ್ಥಳದಿಂದ ನಿರ್ಗಮಿಸಿದ ಕೆಲವೇ ನಿಮಿಷಗಳ ನಂತರ ಕೆಂಪು ಕೋಟೆಯ ಬಳಿ ಸಂಜೆ 6:52-7:00 ಗಂಟೆ ನಡುವೆ ಕಾರು ಸ್ಫೋಟಗೊಂಡಿದೆ. ಪಾರ್ಕಿಂಗ್ ಪ್ರದೇಶಕ್ಕೆ ಪ್ರವೇಶಿಸುವ ಮತ್ತು ನಿರ್ಗಮಿಸುವ ವೇಳೆ ಕಾರಿನಲ್ಲಿ ನೀಲಿ ಮತ್ತು ಕಪ್ಪು ಬಣ್ಣದ ಟೀ ಶರ್ಟ್, ಮುಖಕ್ಕೆ ಮಾಸ್ಕ್ ಧರಿಸಿದ್ದ ಚಾಲಕ ಒಬ್ಬನೇ ಕುಳಿತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ತನಿಖಾಧಿಕಾರಿಗಳು ಈಗ ದರ್ಯಗಂಜ್ ಕಡೆಗೆ ಹೋಗುವ ಮಾರ್ಗವನ್ನು ಪತ್ತೆಹಚ್ಚುತ್ತಿದ್ದಾರೆ. ಕಾರು ಎಲ್ಲಿಂದ ಆಗಮಿಸಿದೆ ಎನ್ನುವುದನ್ನು ಕಂಡುಹಿಡಿಯಲು ೧೦೦ಕ್ಕೂ ಹೆಚ್ಚು ಸಿಸಿಟಿವಿಗಳನ್ನು ಪರಿಶೀಲಿಸುತ್ತಿದ್ದಾರೆ. ಶಂಕಿತ ಆತ್ಮಹತ್ಯಾ ಬಾಂಬರ್ ಉಮರ್ ಇನ್ನೂ ಇಬ್ಬರು ಸಹಚರರೊಂದಿಗೆ ದಾಳಿಯನ್ನು ಯೋಜಿಸಿದ್ದಲ್ಲದೆ ಕಾರಿನಲ್ಲಿ ಡಿಟೋನೇಟರ್ ಅಳವಡಿಸಿದ್ದ ಎಂದು ಮೂಲಗಳಿಂದ ತಿಳಿದುಬಂದಿದೆ. ಇದೀಗ ಡಾ. ಉಮರ್ ಮೊಹಮ್ಮದ್ ನಿಜವಾಗಿಯೂ ಕಾರಿನಲ್ಲಿದ್ದನೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಮೃತರ ಡಿಎನ್‌ಎ ಪರೀಕ್ಷೆಯನ್ನು ನಡೆಸಲು ಮುಂದಾಗಿದ್ದಾರೆ.

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

11 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

11 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

11 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

12 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

13 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

13 hours ago