ನವದೆಹಲಿ: ದೆಹಲಿಯ ಕೆಂಪು ಕೋಟೆ ಕಾರು ಸ್ಫೋಟ ಪ್ರಕರಣದ ಆತ್ಮಹತ್ಯಾ ಬಾಂಬರ್ ಎಂದು ಶಂಕಿಸಲಾಗಿರುವ ಡಾ. ಉಮರ್ ಮೊಹಮ್ಮದ್ ಎಂಬಾತನ ಮೊದಲ ಚಿತ್ರ ಇದೀಗ ಬಹಿರಂಗಗೊಂಡಿದೆ.
ದೆಹಲಿಯ ಕೆಂಪು ಕೋಟೆ ಕಾರು ಸ್ಫೋಟದಲ್ಲಿ ಭಾಗಿಯಾಗಿರುವ ಹುಂಡೈ ಐ20 ಕಾರನ್ನು ಸ್ಫೋಟಕ್ಕೂ ಮುನ್ನ ಮಸೀದಿಯೊಂದರ ಬಳಿ ಮೂರು ಗಂಟೆಗಳ ಕಾಲ ಪಾರ್ಕಿಂಗ್ ಮಾಡಲಾಗಿತ್ತು. ಕಾರು ಸುನೇಹ್ರಿ ಮಸೀದಿ ಪಾರ್ಕಿಂಗ್ ಸ್ಥಳಕ್ಕೆ ಮಧ್ಯಾಹ್ನ 3:19 ಕ್ಕೆ ಪ್ರವೇಶಿಸಿ ಸಂಜೆ 6:48ಕ್ಕೆ ನಿರ್ಗಮಿಸಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬಂದಿದೆ.
ಪಾರ್ಕಿಂಗ್ ಸ್ಥಳದಿಂದ ನಿರ್ಗಮಿಸಿದ ಕೆಲವೇ ನಿಮಿಷಗಳ ನಂತರ ಕೆಂಪು ಕೋಟೆಯ ಬಳಿ ಸಂಜೆ 6:52-7:00 ಗಂಟೆ ನಡುವೆ ಕಾರು ಸ್ಫೋಟಗೊಂಡಿದೆ. ಪಾರ್ಕಿಂಗ್ ಪ್ರದೇಶಕ್ಕೆ ಪ್ರವೇಶಿಸುವ ಮತ್ತು ನಿರ್ಗಮಿಸುವ ವೇಳೆ ಕಾರಿನಲ್ಲಿ ನೀಲಿ ಮತ್ತು ಕಪ್ಪು ಬಣ್ಣದ ಟೀ ಶರ್ಟ್, ಮುಖಕ್ಕೆ ಮಾಸ್ಕ್ ಧರಿಸಿದ್ದ ಚಾಲಕ ಒಬ್ಬನೇ ಕುಳಿತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ತನಿಖಾಧಿಕಾರಿಗಳು ಈಗ ದರ್ಯಗಂಜ್ ಕಡೆಗೆ ಹೋಗುವ ಮಾರ್ಗವನ್ನು ಪತ್ತೆಹಚ್ಚುತ್ತಿದ್ದಾರೆ. ಕಾರು ಎಲ್ಲಿಂದ ಆಗಮಿಸಿದೆ ಎನ್ನುವುದನ್ನು ಕಂಡುಹಿಡಿಯಲು ೧೦೦ಕ್ಕೂ ಹೆಚ್ಚು ಸಿಸಿಟಿವಿಗಳನ್ನು ಪರಿಶೀಲಿಸುತ್ತಿದ್ದಾರೆ. ಶಂಕಿತ ಆತ್ಮಹತ್ಯಾ ಬಾಂಬರ್ ಉಮರ್ ಇನ್ನೂ ಇಬ್ಬರು ಸಹಚರರೊಂದಿಗೆ ದಾಳಿಯನ್ನು ಯೋಜಿಸಿದ್ದಲ್ಲದೆ ಕಾರಿನಲ್ಲಿ ಡಿಟೋನೇಟರ್ ಅಳವಡಿಸಿದ್ದ ಎಂದು ಮೂಲಗಳಿಂದ ತಿಳಿದುಬಂದಿದೆ. ಇದೀಗ ಡಾ. ಉಮರ್ ಮೊಹಮ್ಮದ್ ನಿಜವಾಗಿಯೂ ಕಾರಿನಲ್ಲಿದ್ದನೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಮೃತರ ಡಿಎನ್‌ಎ ಪರೀಕ್ಷೆಯನ್ನು ನಡೆಸಲು ಮುಂದಾಗಿದ್ದಾರೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…