Featured

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು

ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾಗಿ ಎಸಿ ಕೈಕೊಟ್ಟ ಪರಿಣಾಮ ಪ್ರಯಾಣಿಕರು ಉಸಿರಾಡೋಕೂ ತೊಂದರೆ ಅನುಭವಿಸಬೇಕಾದ ಸ್ಥಿತಿ ನಿರ್ಮಾಣವಾಗಿತ್ತು.

ಮಂಗಳವಾರ (ಆ.12) ರಾತ್ರಿ 9:30ರ ಸುಮಾರಿಗೆ ಸ್ಪೈಸ್‌ಜೆಟ್‌ನ ಎಸ್‌ಜಿ-105 ವಿಮಾನವು ದೆಹಲಿಗೆ ಪುಣೆಗೆ ತೆರಳಬೇಕಿತ್ತು, ಆದರೆ ತಡವಾಗಿ 11:30ರ ಸುಮಾರಿಗೆ ಹೊರಡಲು ಸಿದ್ಧವಾಗಿತ್ತು. ವಿಮಾನದೊಳಗೆ ಎಸಿ ಆನ್ ಆಗಿರಲಿಲ್ಲ. ವಿಮಾನ ಟೇಕ್ ಆಫ್ ಆದ ಬಳಿಕವು ಎಸಿ ಆನ್ ಆಗಿರಲಿಲ್ಲ. ಇದರಿಂದ ವಿಮಾನದೊಳಗೆ ಉಸಿರಾಡೋಕೆ ಸಮಸ್ಯೆ ಎದುರಾಯಿತು. ಕೆಲವರಿಗೆ ಮೈ ತುಂಬಾ ಬೆವರು ಬಂದು, ಇನ್ನೇನು ಕುಸಿದು ಬೀಳುತ್ತೇವೆ ಎನ್ನಿಸುತ್ತಿತ್ತು. ಅಲ್ಲದೇ ಗರ್ಭಿಣಿಯರು ಸೇರಿ ಹಲವರು ಅಸ್ವಸ್ಥರಾಗಲು ಪ್ರಾರಂಭಿಸಿದರು ಎಂದು ಪ್ರಯಾಣಿಕರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: 

ಇದರಿಂದ ಸಮಸ್ಯೆ ಎದುರಿಸಿದ ಪ್ರಯಾಣಿಕರು, ಡೋರ್ ಓಪನ್ ಮಾಡಿ, ಎಸಿ ಆನ್ ಮಾಡುವಂತೆ ತಿಳಿಸಿದರೂ ಸುಮ್ಮನಿರಿ ಎಂದು ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದಾರೆ. ಕೊನೆಗೆ ಅಲ್ಲಿದ್ದವರೆಲ್ಲ ವಿಮಾನದ ಬಾಗಿಲು ತೆರೆಯುವಂತೆ ಸಿಬ್ಬಂದಿಯನ್ನು ಆಗ್ರಹಿಸಿದರು. ಅಲ್ಲಿಂದ ವಿಮಾನವನ್ನು ನೇರವಾಗಿ ಬೇಗೆ ತಿರುಗಿಸಲಾಯಿತು. ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು, ಅಸ್ವಸ್ಥಗೊಂಡ ಮಹಿಳೆಯರು ಹಾಗೂ ಗರ್ಭಿಣಿಯರಿಗಾಗಿ ವೀಲ್ ಚೇರ್ ವ್ಯವಸ್ಥೆ ಮಾಡಿ, ಟರ್ಮಿನಲ್ ಕಡೆಗೆ ಕರೆದೊಯ್ದರು.

ನಂತರ ಬೇರೊಂದು ಪರ್ಯಾಯ ವಿಮಾನದ ವ್ಯವಸ್ಥೆ ಮಾಡಲಾಗಿದ್ದು, ಆ ವಿಮಾನವು ಇಂದು (ಆ.12) ಬೆಳಿಗ್ಗೆ 5:30ರ ಸುಮಾರಿಗೆ ದೆಹಲಿಯಿಂದ ಹೊರಟು 7 ಗಂಟೆಗೆ ಪುಣೆಯನ್ನು ತಲುಪಿದೆ ಎಂದು ಸ್ಪೈಸ್‌ಜೆಟ್ ವಕ್ತಾರರು ಈ ಬಗ್ಗೆ ಪ್ರಯಾಣಿಕರಿಗೆ ಕ್ಷಮೆಯಾಚಿಸಿದ್ದಾರೆ

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago