ಉಡುಪಿ, : ರೈತ ವಿರೋಧಿ ಕೃಷಿ ಮತ್ತು ಭೂ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಮೋದಿ ಸರ್ಕಾರದ ದಾಳಿಯನ್ನು ಖಂಡಿಸಿ ಹಾಗೂ ರೈತರ ಹೋರಾಟವನ್ನು ಬೆಂಬಲಿಸಿ ಉಡುಪಿ ಜಿಲ್ಲಾಧಿಕಾರಿ ಕಛೇರಿ ಎದುರು ಸಿಐಟಿಯು, ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘ, ಅಖಿಲ ಭಾರತ ಕಿಸಾನ್ ಸಂಘದ ನೇತೃತ್ವದಲ್ಲಿ ಜಂಟಿಯಾಗಿ ಪ್ರತಿಭಟನೆ ನಡೆಸಿದರು.
ಸಭೆಯನ್ನುದ್ದೇಶಿಸಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ, ”ದೇಶದ ದೊಡ್ಡ ಬಂಡವಾಳಗಾರರಿಗೆ ದೇಶದ ಜನರ ಸಂಪತ್ತನ್ನು ಮಾರಾಟ ಮಾಡುವುದು ಬಿಜೆಪಿ ಪಕ್ಷದ ದೇಶಭಕ್ತಿ ಎಂಬುವುದು ಸಾಬೀತಾಗಿದೆ. ಇಂತಹ ದೇಶಭಕ್ತಿಯು ರೈತರು, ಕಾರ್ಮಿಕರು, ಕೂಲಿಕಾರರಿಗೆ ಬಹುದೊಡ್ಡ ಅಪಾಯ ತರಲಿದೆ. ಬಿಜೆಪಿಯ ಬಂಡವಾಳಗಾರರ ಪರವಾದ ಇಂತಹ ರಾಷ್ಟ್ರೀಯವಾದ ಒಪ್ಪಲು ಸಾಧ್ಯವಿಲ್ಲ” ಎಂದು ಹೇಳಿದರು.
”ಸಣ್ಣ ಕೈಗಾರಿಕೆಗಳು ನಾಶವಾಗುತ್ತಿದ್ದು ನಿರುದ್ಯೋಗ ಉಲ್ಬಣಗೊಂಡು ಜಿಡಿಪಿ ಕುಸಿಯುತ್ತಿದೆ. ಜನರ ಆದಾಯ ಸ್ಥಗಿತಗೊಂಡಿದೆ. ರೈತ ವಿರೋಧಿ, ಭೂಸುಧಾರಣಾ ತಿದ್ದುಪಡಿ ಕಾಯ್ದೆಗಳು ಜನರಿಗೆ ಮತ್ತಷ್ಟು ಸಂಕಷ್ಟ ತರಲಿದೆ. ಇಂತಹ ನೀತಿಗಳ ವಿರುದ್ದ ದಹಲಿ ರೈತರು ಹೋರಾಟ ನಡೆಸುತ್ತಿದ್ದಾರೆ. ಸರಕಾರ ಕೂಡಲೇ ಅವರ ಮೇಲೆ ದಾಖಲಿಸಿರುವ ಕೇಸುಗಳನ್ನು ವಾಪಾಸ್ಸು ಪಡೆಯಬೇಕು. ಕಾರ್ಪೋರೇಟ್ ಪರ ನೀತಿ ಕೂಡಲೇ ಹಿಂತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದರು.
ಈ ಸಂದರ್ಭ ಪ್ರಧಾನ ಮಂತ್ರಿಯವರಿಗೆ ಜಿಲ್ಲಾಧಿಕಾರಿಯವರ ಮೂಲಕ ಮನವಿ ನೀಡಲಾಯಿತು. ಸಿಐಟಿಯು ಮುಖಂಡರಾದ ಕೆ.ಶಂಕರ್, ಎಚ್ ನರಸಿಂಹ, ಶಶಿಧರಗೊಲ್ಲ, ಮಹಾಬಲವಡೇರ ಹೋಬಳಿ, ಬಲ್ಕೀಸ್ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…