Featured

ದೆಹಲಿ ರೈತರ ಹೋರಾಟ ಬೆಂಬಲಿಸಿ ಉಡುಪಿಯಲ್ಲಿ ಪ್ರತಿಭಟನೆ  -Vishwanews24

ದೆಹಲಿ ರೈತರ ಹೋರಾಟ ಬೆಂಬಲಿಸಿ ಉಡುಪಿಯಲ್ಲಿ ಪ್ರತಿಭಟನೆ  -Vishwanews24

ಉಡುಪಿ,  : ರೈತ ವಿರೋಧಿ ಕೃಷಿ ಮತ್ತು ಭೂ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಮೋದಿ ಸರ್ಕಾರದ ದಾಳಿಯನ್ನು ಖಂಡಿಸಿ ಹಾಗೂ ರೈತರ ಹೋರಾಟವನ್ನು ಬೆಂಬಲಿಸಿ ಉಡುಪಿ ಜಿಲ್ಲಾಧಿಕಾರಿ ಕಛೇರಿ ಎದುರು ಸಿಐಟಿಯು, ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘ, ಅಖಿಲ ಭಾರತ ಕಿಸಾನ್ ಸಂಘದ ನೇತೃತ್ವದಲ್ಲಿ ಜಂಟಿಯಾಗಿ ಪ್ರತಿಭಟನೆ ನಡೆಸಿದರು.

ಸಭೆಯನ್ನುದ್ದೇಶಿಸಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ, ”ದೇಶದ ದೊಡ್ಡ ಬಂಡವಾಳಗಾರರಿಗೆ ದೇಶದ ಜನರ ಸಂಪತ್ತನ್ನು ಮಾರಾಟ ಮಾಡುವುದು ಬಿಜೆಪಿ ಪಕ್ಷದ ದೇಶಭಕ್ತಿ ಎಂಬುವುದು ಸಾಬೀತಾಗಿದೆ. ಇಂತಹ ದೇಶಭಕ್ತಿಯು ರೈತರು, ಕಾರ್ಮಿಕರು, ಕೂಲಿಕಾರರಿಗೆ ಬಹುದೊಡ್ಡ ಅಪಾಯ ತರಲಿದೆ. ಬಿಜೆಪಿಯ ಬಂಡವಾಳಗಾರರ ಪರವಾದ ಇಂತಹ ರಾಷ್ಟ್ರೀಯವಾದ ಒಪ್ಪಲು ಸಾಧ್ಯವಿಲ್ಲ” ಎಂದು ಹೇಳಿದರು.

”ಸಣ್ಣ ಕೈಗಾರಿಕೆಗಳು ನಾಶವಾಗುತ್ತಿದ್ದು ನಿರುದ್ಯೋಗ ಉಲ್ಬಣಗೊಂಡು ಜಿಡಿಪಿ ಕುಸಿಯುತ್ತಿದೆ. ಜನರ ಆದಾಯ ಸ್ಥಗಿತಗೊಂಡಿದೆ. ರೈತ ವಿರೋಧಿ, ಭೂಸುಧಾರಣಾ ತಿದ್ದುಪಡಿ ಕಾಯ್ದೆಗಳು ಜನರಿಗೆ ಮತ್ತಷ್ಟು ಸಂಕಷ್ಟ ತರಲಿದೆ. ಇಂತಹ ನೀತಿಗಳ ವಿರುದ್ದ ದಹಲಿ ರೈತರು ಹೋರಾಟ ನಡೆಸುತ್ತಿದ್ದಾರೆ. ಸರಕಾರ ಕೂಡಲೇ ಅವರ ಮೇಲೆ ದಾಖಲಿಸಿರುವ ಕೇಸುಗಳನ್ನು ವಾಪಾಸ್ಸು ಪಡೆಯಬೇಕು. ಕಾರ್ಪೋರೇಟ್ ಪರ ನೀತಿ ಕೂಡಲೇ ಹಿಂತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭ ಪ್ರಧಾನ ಮಂತ್ರಿಯವರಿಗೆ ಜಿಲ್ಲಾಧಿಕಾರಿಯವರ ಮೂಲಕ ಮನವಿ ನೀಡಲಾಯಿತು. ಸಿಐಟಿಯು ಮುಖಂಡರಾದ ಕೆ.ಶಂಕರ್, ಎಚ್ ನರಸಿಂಹ, ಶಶಿಧರಗೊಲ್ಲ, ಮಹಾಬಲವಡೇರ ಹೋಬಳಿ, ಬಲ್ಕೀಸ್ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

2 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

2 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

3 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

3 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

4 hours ago

ಬೆಳ್ತಂಗಡಿ : ಜೂನ್ 1 ರಿಂದ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು – vishwanews24

ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…

4 hours ago