ದೆಹಲಿ ಹಿಂಸಾಚಾರಕ್ಕೆ ಕೇಂದ್ರ ಸರ್ಕಾರವೇ ನೇರಹೊಣೆ : ಶರದ್ ಪವಾರ್ -Vishwanews24

ಮುಂಬೈ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ ಶೇ.100ರಷ್ಟು ಕೇಂದ್ರ ಸರ್ಕಾರವೇ ನೇರಹೊಣೆ ಎಂದು ಎನ್’ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಆರೋಪಿಸಿದ್ದಾರೆ.

ಮುಂಬೈನಲ್ಲಿ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಕೇಂದ್ರದ ಬಿಜೆಪಿ ನೇತೃತ್ವದ ಆಡಳಿತಾರೂಢ ಎನ್’ಡಿಎ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ದಹಲಿ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಬಿಜೆಪಿ ಒಡಕು ರಾಜಕೀಯ ಮಾಡುತ್ತಿದೆ. ಸಂವಿಧಾನದ ಪ್ರಕಾರ ಸಾರ್ವಜನಿಕ ಪ್ರತಿನಿಧಿಗಳಾಗಲೀ, ಆಡಳಿತಾರೂಢ ಪಕ್ಷವಾಗಲೀ ದೆಹಲಿಯಲ್ಲಿ ಸೃಷ್ಟಿಯಾದ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಗೆ ಹೊಣೆಯಲ್ಲವ. ಕೇಂದ್ರ ಸರ್ಕಾರದ ಮೇಲೆ ಇದರ ಜವಾಬ್ದಾರಿಯಿದೆ. ದೆಹಲಿಯಲ್ಲಿ ಏನೇ ಆಗಿದ್ದರೂ ಅದಕ್ಕೆ ಕೇಂದ್ರ ಸರ್ಕಾರವೇ ಶೇ.100 ಹೊಣೆಯಾಗಿದೆ ಎಂದು ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ರಾಜಧಾನಿ ದೆಹಲಿ ಹೊತ್ತಿ ಉರಿಯುತ್ತಲೇ ಇದೆ. ಕೇಂದ್ರ ಸರ್ಕಾರದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷ ದೆಹಲಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಾಧ್ಯವಾಗದಲಿಲ್ಲ.ಹೀಗಾಗಿ ಕೋಮುವಾದವನ್ನು ಬಿತ್ತುವ ಮೂಲಕ ಸಮಾಜವನ್ನು ಒಡೆಯಲು ಯತ್ನಿಸುತ್ತಿದೆ. ಸಮಾಜದಲ್ಲಿ ಹಾಗೂ ಧಾರ್ಮಿಕ ಶಾಂತಿ ಕದಡಲು ಪ್ರಧಾನಮಂತ್ರಿ, ಗೃಹ ಸಚಿವ ಹಾಗೂ ಕೇಂದ್ರದ ಸಚಿವರೇ ಕಾರಣ. ದೇಶದ ಪ್ರಧಾನಮಂತ್ರಿಗಳು ಎಲ್ಲಾ ಧರ್ಮಕ್ಕೂ ಸೀಮಿತರಾಗಿರಬೇಕು. ಎಲ್ಲಾ ರಾಜ್ಯ, ಎಲ್ಲಾ ರೀತಿಯ ಜನತೆ ಹಾಗೂ ಇಡೀ ದೇಶದ ವ್ಯಕ್ತಿಯಾಗಿರಬೇಕು. ಆದರೆ, ಅಂತಹ ಸ್ಥಾನದಲ್ಲಿರುವ ವ್ಯಕ್ತಿ ಧಾರ್ಮಿಕವಾಗಿ ಮಾತನಾಡುತ್ತಿದ್ದಾರೆ. ಇದೇ ರೀತಿಯಾಗಿಯೇ ಕೇಂದ್ರ ಸಚಿವರು ಹಾಗೂ ಗೃಹ ಸಚಿವರೂ ಮಾತನಾಡುತ್ತಿದ್ದಾರೆ. ಇವುಗಳಿಗೆ ತಮ್ಮ ಶಕ್ತಿ ಪ್ರದರ್ಶನ ಮಾಡುವ ಬದಲು ನಾಯಕರು ಜನತೆಯ ಭದ್ರತೆಯತ್ತ ತಮ್ಮ ಬಲವನ್ನು ಉಪಯೋಗಿಸಬೇಕು. ಗೋಲಿಮಾರೋ ಎಂಬಂತಹ ಹೇಳಿಕೆಗಳನ್ನು ಬಿಜೆಪಿ ಸಚಿವರು ನೀಡುತ್ತಿದ್ದಾರೆ. ಇದು ಅತ್ಯಂತ ಖಂಡನೀಯ ವಿಚಾರ ಎಂದು ತಿಳಿಸಿದ್ದಾರೆ.

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

2 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

4 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

4 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

4 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

5 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

5 hours ago