Featured

ದೇಣಿಗೆ ನೀಡಿ ಶ್ರೀರಾಮನನ್ನು ಕುರುಡಾಗಿ ಆರಾಧಿಸುವ ಭಕ್ತ ನಾನಲ್ಲ,  ಹಣ ನೀಡಿ ನನ್ನ ಭಕ್ತಿ ಸಾಬೀತು ಮಾಡಬೇಕಿಲ್ಲ: ಹೆಚ್ ಡಿಕೆ -Vishwanews24

ದೇಣಿಗೆ ನೀಡಿ ಶ್ರೀರಾಮನನ್ನು ಕುರುಡಾಗಿ ಆರಾಧಿಸುವ ಭಕ್ತ ನಾನಲ್ಲ,  ಹಣ ನೀಡಿ ನನ್ನ ಭಕ್ತಿ ಸಾಬೀತು ಮಾಡಬೇಕಿಲ್ಲ: ಹೆಚ್ ಡಿಕೆ -Vishwanews24

ಬೆಂಗಳೂರು : ಹಣ, ದೇಣಿಗೆ ನೀಡಿ ಶ್ರೀರಾಮನನ್ನು ಕುರುಡು ಕುರುಡಾಗಿ ಆರಾಧಿಸುವ ಭಕ್ತ ನಾನಲ್ಲ. ಹಣ ನೀಡಿ ನನ್ನ ಭಕ್ತಿ ಸಾಬೀತು ಮಾಡಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು, ಆಗಾಗ್ಗೆ ಈ ಮಾತು ಹೇಳುತ್ತಿರುತ್ತೇನೆ. ನಮ್ಮ ನಡುವಿನ ನಿಷ್ಕಪಟ, ಕಳಂಕವಿಲ್ಲದ ಜಾತ್ಯತೀತವಾದಿ ದೇವೇಗೌಡರು. ತಮ್ಮ ಧರ್ಮದ ಬಗ್ಗೆ ಆಳವಾದ ನಂಬಿಕೆ ಇದ್ದೂ, ಪರಧರ್ಮದ ಬಗ್ಗೆ ಅಪಾರ ಗೌರವ ಉಳ್ಳವರವರು. ಅವರಷ್ಟು ದೈವತ್ವ ನಂಬಿದವರು, ದೇಗುಲ ನೋಡಿದವರು ಇನ್ನೊಬ್ಬರಿಲ್ಲ. ದೈವದ ಮೇಲೆ ನಮ್ಮ ಕುಟುಂಬಕ್ಕಿರುವ ನಂಬಿಕೆ ಪ್ರಶ್ನಿಸುವವರು ಮೂರ್ಖರು ಎಂದಿದ್ದಾರೆ.

ಇಂಧನದ ಮೇಲಿನ ತೆರಿಗೆಯನ್ನು ಮೋದಿ ಸರ್ಕಾರ ವಾಪಸ್ ಪಡೆಯುವಂತೆ ಕಾಂಗ್ರೆಸ್ ಆಗ್ರಹ -Vishwanews24

“ಪ್ರಧಾನಿ ಸ್ಥಾನ ಕೊಟ್ಟಿದ್ದೂ ದೇವರೇ, ಆ ಸ್ಥಾನದಲ್ಲಿ ಮುಂದುವರಿಯುವ ಅಥವಾ ಸ್ಥಾನ ತೊರೆಯುವ ಅವಕಾಶಗಳಿದ್ದರೂ ಸ್ಥಾನ ತೊರೆಯಬೇಕೆಂಬ ನಿರ್ಣಯ ಕೊಟ್ಟಿದ್ದೂ ದೇವರೇ,” ಇದು ಶೃಂಗೇರಿ ಜಗದ್ಗುರುಗಳ ಎದುರು ದೇವೇಗೌಡರು ಪ್ರಮಾಣಿಕವಾಗಿ, ಬಹಿರಂಗವಾಗಿ ಹೇಳಿದ್ದ ಮಾತು. ಇದು ನಮ್ಮ ದೈವ ಬದ್ಧತೆಗೆ ಸಾಕ್ಷಿ. ಇದು ನಮಗಿರುವ ದೈವ ಕೃಪೆಗೂ ಸಾಕ್ಷಿ ಎಂದಿದ್ದಾರೆ.

ಇಚ್ಛೆಗಳನ್ನಿಟ್ಟುಕೊಂಡು ದೇವರನ್ನು ಆರಾಧಿಸುವುದೇ ತಪ್ಪು. ಅಂಥದ್ದರಲ್ಲಿ ದೇವರನ್ನು ಅಧಿಕಾರಕ್ಕಾಗಿ, ರಾಜಕೀಯಕ್ಕಾಗಿ, ಹಣಕ್ಕಾಗಿ ಬಳಸಿಕೊಳ್ಳುವುದು ಧಾರ್ಮಿಕ ಭ್ರಷ್ಟಾಚಾರ. ರಾಮನ ಹೆಸರಲ್ಲಿ ಧಾರ್ಮಿಕ ಭ್ರಷ್ಟಾಚಾರದಲ್ಲಿ ತೊಡಗಿರುವವರಿಗೆಲ್ಲ ಮುಂದೆ ತಕ್ಕ ಫಲ ಸಿಗಲಿಕ್ಕಿದೆ.ಈಗ ಅರಚುವವರೆಲ್ಲರೂ ಅದಕ್ಕಾಗಿ ಕಾಯಲಿ.ಅದರ ಫಲವನ್ನೂ ಉಣ್ಣಲಿ ಎಂದರು.

ಉಡುಪಿ : ಪೇಜಾವರ ಶ್ರೀಗಳ ಸನ್ಯಾಸತ್ವ ಸ್ವೀಕಾರದ 33ನೇ ವರ್ಧಂತಿ ಉತ್ಸವ -Vishwanews24

ದೇವರ ವಿಚಾರದಲ್ಲಿ ನಮಗಿರುವ ಬದ್ಧತೆಯನ್ನು ಪ್ರಶ್ನೆ ಮಾಡುವವರು, ನನ್ನನ್ನು ಹಾಗೂ ನನ್ನ ಕುಟುಂಬವನ್ನು ಟೀಕೆ ಮಾಡುವವರು, ಬಾಯಿಗೆ ಬಂದಂತೆ ಮಾತನಾಡುವವರು ಒಂದಲ್ಲ ಹತ್ತು ಬಾರಿ ಯೋಚನೆ ಮಾಡುವುದು ಒಳಿತು. ಯಾಕೆಂದರೆ, ನಾನಾಗಲಿ, ನನ್ನ ಕುಟುಂಬವಾಗಲಿ ಈಗ ದೇಶದಲ್ಲಿ ಕೆಲವರಿಂದ ನಡೆಯುತ್ತಿರುವ ಧಾರ್ಮಿಕ ಭ್ರಷ್ಟಾಚಾರದಂಥ ಕೃತ್ಯ ಮಾಡಿಲ್ಲ ಎಂದಿದ್ದಾರೆ.

ಪಬ್ಲಿಸಿಟಿಗೆ ನಾನು ಈ ಹೇಳಿಕೆ ಕೊಟ್ಟಿದ್ದೇನೆ ಎಂದು ಸೋದರ ಶ್ರೀರಾಮುಲು ಹೇಳಿದ್ದಾರೆ. ಪಾಪ ಅವರು ಮುಗ್ಧರು. ದೈವಬಲ, ಜನಾಶಿರ್ವಾದದಿಂದ 2 ಬಾರಿ ಸಿಎಂ ಆದ ನಾನು ಇನ್ನು ಯಾವ ಪಬ್ಲಿಸಿಟಿ ಪಡೆಯಬೇಕಿದೆ? ನನಗೆ ಅದರ ಅಗತ್ಯವೇನಿದೆ? ರಾಮ ಮಂದಿರ ಆಗಬೇಕೆಂದು ಕುಮಾರಸ್ವಾಮಿ ಅವರ ಮನಸ್ಸಲ್ಲೂ ಇದೆ ಎಂಬ ಅವರ ಮಾತನ್ನು ಮಾತ್ರ ಅನುಮೋದಿಸುತ್ತೇನೆ ಎಂದಿದ್ದಾರೆ.

ಇತಿಹಾಸ ಹೇಳುತ್ತಾ ನಿಂತಿರುವ ಪುರಾತನ ದೇಗುಲಗಳ ಹಿಂದೆ ಜನರನ್ನು ವಿಭಜಿಸಿದ ಕತೆಗಳಿಲ್ಲ. ಆ ದೇಗುಲಗಳ ನಿರ್ಮಾಣಕ್ಕಾಗಿ ದೇಣಿಗೆ ಹೆಸರಿನಲ್ಲಿ ಹಣ ಸಂಗ್ರಹಿಸಿದ ಉಲ್ಲೇಖವಿಲ್ಲ. ದೇವರನ್ನು ರಾಜಕೀಯಕ್ಕಾಗಿ ಉಪಯೋಗಿಸಿಕೊಂಡ ಉಲ್ಲೇಖವಿರುವ ಒಂದೇ ಒಂದು ಶಾಸನ ನಮಗೆ ಸಿಕ್ಕಿಲ್ಲ. ಈಗ ಇಂಥ ಕೃತ್ಯ ಮಾಡುತ್ತಿರುವವರು ದಯವಿಟ್ಟು ನಿಲ್ಲಿಸಿ ಎಂದಿದ್ದಾರೆ.

ಹೆಜಮಾಡಿ ಟೋಲ್ ಗೇಟ್ ಸುಂಕ ವಿನಾಯಿತಿಗೆ ಆಗ್ರಹಿಸಿ ಪ್ರತಿಭಟನೆ -Vishwanews24

ಈ ವಿಚಾರವಾಗಿ ಮಕ್ಕಳು-ಮರಿಗಳಿಗೆ,ಅಪ್ಪನ ಅಧಿಕಾರದ ಹಿಂದೆ ಅಡಗಿ ದುಡ್ಡು ಕೊಳ್ಳೆ ಹೊಡೆಯುತ್ತಿರುವ ಸ್ವಘೋಷಿತ ನವ ಇಲಿಗಳಿಗೆ ನಾನು ಪ್ರತಿಕ್ರಿಯಿಸಲಾರೆ. ಇಷ್ಟು ಹೇಳಿಯೂ ಅರ್ಥವಾಗದವರಿಗೆ ಹೇಳುವುದು ಇಷ್ಟೆ-ರಾಮಮಂದಿರ ಹಿಂದೂಗಳ ಭಕ್ತಿ,ಭಾವನೆಗಳ ಮೂರ್ತ ರೂಪ ಅದು ಆಗಬೇಕು. ಆದರೆ ಅದೇ ಹೆಸರಿನಲ್ಲಿ ನಡೆಯುತ್ತಿರುವ ವಿಭಜನೆಗೆ ನನ್ನ ವಿರೋಧ ಎಂದು ಬರೆದುಕೊಂಡಿದ್ದಾರೆ.

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

4 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

4 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

5 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

5 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

9 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

9 hours ago