Featured

ದೇರಳಕಟ್ಟೆ : ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್‌ ವಾಹನ ಢಿಕ್ಕಿ ; ವಿದ್ಯಾರ್ಥಿನಿ ಸಾವು – vishwanews24

ಉಳ್ಳಾಲ : ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್‌ ವಾಹನ ಢಿಕ್ಕಿ ; ವಿದ್ಯಾರ್ಥಿನಿ ಸಾವು

ಉಳ್ಳಾಲ :ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್‌ ನಡುವೆ ಸಂಭವಿಸಿದ ಅಪಘಾತದಲ್ಲಿ 11ರ ಹರೆಯದ ನಾಲ್ಕನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಇಂದು ಸಂಭವಿಸಿದೆ.

ಬಡಕಬೈಲು ಮಹಮ್ಮದ್‌ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (11) ಮೃತ ವಿದ್ಯಾರ್ಥಿನಿ. ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ರಿಕ್ಷಾ ಕಲ್ಲಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಪಿಕಪ್‌ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ಆಯಿಷಾ ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾಳೆ.

ರಿಕ್ಷಾದಲ್ಲಿದ್ದ ಇತರೆ ನಾಲ್ವರು ವಿದ್ಯಾರ್ಥಿಗಳು ಅಲ್ಪಸ್ವಲ್ಪ ಗಾಯಗೊಂಡಿದ್ದಾರೆ. ರಿಕ್ಷಾ ಚಾಲಕನಿಗೂ ಗಾಯವಾಗಿದೆ. ಗಾಯಾಳುಗಳನ್ನು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿದ್ಯಾರ್ಥಿನಿ ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ದೇರಳಕಟ್ಟೆ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಇಂದು ರಜೆ ಘೋಷಿಸಲಾಗಿದೆ.

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

41 minutes ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

7 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

7 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

8 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

10 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

10 hours ago