ಉಳ್ಳಾಲ :ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ 11ರ ಹರೆಯದ ನಾಲ್ಕನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಇಂದು ಸಂಭವಿಸಿದೆ.
ಬಡಕಬೈಲು ಮಹಮ್ಮದ್ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (11) ಮೃತ ವಿದ್ಯಾರ್ಥಿನಿ. ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ರಿಕ್ಷಾ ಕಲ್ಲಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ಆಯಿಷಾ ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾಳೆ.
ರಿಕ್ಷಾದಲ್ಲಿದ್ದ ಇತರೆ ನಾಲ್ವರು ವಿದ್ಯಾರ್ಥಿಗಳು ಅಲ್ಪಸ್ವಲ್ಪ ಗಾಯಗೊಂಡಿದ್ದಾರೆ. ರಿಕ್ಷಾ ಚಾಲಕನಿಗೂ ಗಾಯವಾಗಿದೆ. ಗಾಯಾಳುಗಳನ್ನು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿದ್ಯಾರ್ಥಿನಿ ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ದೇರಳಕಟ್ಟೆ ನೇತಾಜಿ ಸುಭಾಷ್ ಚಂದ್ರ ಬೋಸ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಇಂದು ರಜೆ ಘೋಷಿಸಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…