Featured

ದೇವರನಾಡು ಕೇರಳದಲ್ಲಿ ಜಲಪ್ರಳಯ- 79 ಕ್ಕೂ ಹೆಚ್ಚು ಬಲಿ

ಕೇರಳ:  ಜಲಪ್ರಳಯಕ್ಕೆ ದೇವರನಾಡು ಕೇರಳ ತತ್ತರಿಸಿದ್ದು, ಈವರೆಗೆ ಮಳೆ, ಭೂಕುಸಿತ, ಪ್ರವಾಹ, ನೆರೆ ಮುಂತಾಗಿ ಸಂಭವಿಸಿರುವ ದುರಂತಗಳಿಗೆ ಬಲಿಯಾದವರ ಸಂಖ್ಯೆ 79ಕ್ಕೇರಿದೆ.

ಕಳೆದ ಆಗಸ್ಟ್‌ 8ರಿಂದ ರಾಜ್ಯದಲ್ಲಿ ಆರಂಭಗೊಂಡಿದ್ದ ಭಾರಿ ಮಳೆ ಇನ್ನೂ ಮುಂದುವರಿದಿದ್ದು ಈ ಪರಿಸ್ಥಿತಿ ಶನಿವಾರದ ತನಕವೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಡುವೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಯಾವುದೇ ರೀತಿಯ ಪರಿಸ್ಥಿತಿಯನ್ನು ಎದುರಿಸಲು ಸಿದ್ದವಾಗಿರುವಂತೆ ಎಲ್ಲಾ ಇಲಾಖೆಗಳಿಗೆ ಸೂಚನೆ ನೀಡಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಗುರುವಾರ ಪ್ರಧಾನಿ ಮೋದಿ ಅವರಿಗೆ ಫೋನಿನಲ್ಲಿ ಕೇರಳದ ಸ್ಥಿತಿಗತಿಯನ್ನು ವಿವರಿಸಿದ್ದಾರೆ.ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕೇರಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸುವಂತೆ, ಪರಿಹಾರ ಒದಗಿಸುವಿಕೆಯನ್ನು ಚುರುಕುಗೊಳಿಸುವಂತೆ ರಕ್ಷಣಾ ಸಚಿವಾಲಯಕ್ಕೆ ಸೂಚಿಸಿದ್ದು, ಕೇರಳ ಜನರ ಸುರಕ್ಷೆಗಾಗಿ ದೇವರಲ್ಲಿ ಪ್ರಾರ್ಥಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ನಿರಂತರ ಜಡಿ ಮಳೆ, ಪ್ರವಾಹ, ಭೂಕುಸಿತದಿಂದ ತತ್ತರಿಸುತ್ತಿರುವ ಕೇರಳದ ಎಲ್ಲ 14 ರಾಜ್ಯಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು ಪರಿಸ್ಥಿತಿ ಗಂಭೀರವಿದ್ದು, 50,000ಕ್ಕೂ ಹೆಚ್ಚು ಜನ ಪ್ರವಾಹದಿಂದ ಸಂತ್ರಸ್ತರಾಗಿದ್ದಾರೆ.

 

Vishwa News 24

Recent Posts

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

1 hour ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

1 hour ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

2 hours ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

2 hours ago

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ :  ಐವರು ಮೃತ್ಯು – vishwanews24

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ :  ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್‌ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…

3 hours ago

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ – vishwanews24

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ…

3 hours ago