ಹಾಸನ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ, ಜೆಡಿಎಸ್‌ನ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣರ ಮಾಜಿ ಕಾರು ಚಾಲಕ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಪ್ರಜ್ವಲ್ ರೇವಣ್ಣರ ಮಾಜಿ ಕಾರು ಚಾಲಕ ಕಾರ್ತಿಕ್ ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿದ್ದು, ಅದರಲ್ಲಿ ‘ನಾನು ಹದಿನೈದು ವರ್ಷದಿಂದ ಪ್ರಜ್ವಲ್ ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿ ಕೆಲಸ ಮಾಡಿದ್ದೀನಿ. ಒಂದು ವರ್ಷದ ಹಿಂದೆ ಕೆಲಸ ಬಿಟ್ಟಿದ್ದೀನಿ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದ್ರು, ಹಿಂಸೆ ಕೊಟ್ಟು ಹಲ್ಲೆ ಮಾಡಿದರು. ಆದ್ದರಿಂದ ಕೆಲಸ ಬಿಟ್ಟು ಅವರ ಮನೆಯಿಂದ ಹೊರಬಂದೆ ಎಂದು ಹೇಳಿದ್ದಾರೆ.
ದೇವರಾಜೇಗೌಡ ಅವರು ದೇವೇಗೌಡರ ಫ್ಯಾಮಿಲಿ ವಿರುದ್ಧ ಹೋರಾಟ ಮಾಡುತ್ತಿದ್ದರು. ಯಾರಿಂದಲೂ ನ್ಯಾಯ ಸಿಗಲ್ಲ ಅಂತ ದೇವರಾಜೇಗೌಡ ಬಳಿ ಹೋದೆ ಎಂದಿರುವ ಮಾಜಿ ಕಾರ್ ಚಾಲಕ ಕಾರ್ತಿಕ್, ಯಾವುದೇ ಅಶ್ಲೀಲ ವಿಡಿಯೋ ರಿಲೀಸ್ ಮಾಡಬಾರದು ಎಂದು ನನ್ನ ವಿರುದ್ದ ಪ್ರಜ್ವಲ್ ರೇವಣ್ಣ ಸ್ಟೇ ತಂದಿದ್ದಾರೆ. ಆಗ ನಿನ್ನ ಬಳಿ ಇರುವ ವಿಡಿಯೋ, ಫೋಟೋಸ್ ನಾನು ಯಾರಿಗೂ ತೋರಿಸಲ್ಲ ಕೊಡು ಎಂದು ದೇವರಾಜೇಗೌಡ ಕೇಳಿದ್ರು. ನಾನು ನಂಬಿ ನನ್ನ ಬಳಿಯಿದ್ದ ವಿಡಿಯೋದ ಒಂದು ಕಾಪಿ ಕೊಟ್ಟೆ. ಅವರು ಅದನ್ನು ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೋ ಗೊತ್ತಿಲ್ಲ. ದೇವರಾಜೇಗೌಡರನ್ನು ಬಿಟ್ಟರೆ ಬೇರೆ ಯಾರಿಗೂ ಕೊಟ್ಟಿಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್‌ನವರಿಗೆ ನಾನು ವಿಡಿಯೋ ಕೊಟ್ಟಿಲ್ಲ’ ಎಂದಿರುವ ಕಾರ್ತಿಕ್, ಕಾಂಗ್ರೆಸ್ ಅವರ ಮೇಲೆ ನಂಬಿಕೆ ಇಲ್ಲದೆ ದೇವರಾಜೇಗೌಡರ ಹತ್ತಿರ ಕೊಟ್ಟಿದ್ದೆ. ಪೆನ್‌ಡ್ರೈವ್ ಯಾರು ಹಂಚಿದರೋ ಗೊತ್ತಿಲ್ಲ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನಾನು ಕಾಂಗ್ರೆಸ್ ಅವರಿಗೆ ಕೊಡುವುದಿದ್ದರೆ ದೇವರಾಜೇಗೌಡ ಬಳಿ ಏಕೆ ಹೋಗುತ್ತಿದ್ದೆ ಇವತ್ತು ಎಸ್‌ಐಟಿ ಮುಂದೆ ಹಾಜರಾಗಿ ಎಲ್ಲಾ ಹೇಳಿಕೊಳ್ಳುತ್ತೇನೆ. ನಂತರ ಮಾಧ್ಯಮದ ಮುಂದೆ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ ಎಂದಿದ್ದಾರೆ.
ರೇವಣ್ಣ ಮನೆಯಲ್ಲಿ ಏನೆಲ್ಲಾ ನಡೆದಿದೆ ನಾನು ನೋಡಿದ್ದೇನೆ. ಎಲ್ಲವನ್ನೂ ಎಸ್‌ಐಟಿ ಮುಂದೆ ಹೇಳುತ್ತೇನೆ. ಯಾರಿಗೆ ಅನ್ಯಾಯ ಆಗಿದೆಯೋ ಧೈರ್ಯವಾಗಿ ಮುಂದೆ ಬನ್ನಿ ಎಂದು ಕಾರ್ತಿಕ್ ವಿಡಿಯೊ ಮೂಲಕ ಮನವಿ ಮಾಡಿದ್ದಾರೆ.
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…