ನವದೆಹಲಿ: ದೇವರ ದಯೆಯಿಂದ ಡಿ.ಕೆ.ಶಿವಕುಮಾರ್ ಇವತ್ತು ಬಿಡುಗಡೆಯಾಗುವ ವಿಶ್ವಾಸವಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.
ಬಿಜೆಪಿ ವಿರೋಧಿಸುವವರ ವಿರುದ್ದ ನಿರಂತರ ಸೇಡಿನ ರಾಜಕಾರಣ ಮಾಡಲಾಗುತ್ತಿದೆ.ಇದು ಖಂಡಿತಾ ಒಳ್ಳೆಯ ಬೆಳವಣಿಗೆಯಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಿಡಿಕಾರಿದ್ದಾರೆ.
ದೆಹಲಿಯಲ್ಲಿ ತಮ್ಮನ್ನು ಭೇಟಿ ಮಾಡಲು ಬಂದ ಸಂಸದ ಡಿ.ಕೆ.ಸುರೇಶ್ ಜೊತೆ ಕೆಲ ಹೊತ್ತು ಸಮಾಲೋಚನೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ , ದೇವರ ದಯೆಯಿಂದ ಡಿ.ಕೆ.ಶಿವಕುಮಾರ್ ಇವತ್ತು ಬಿಡುಗಡೆಯಾಗುವ ವಿಶ್ವಾಸವಿದೆ. ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣ ಹೊಸದೇನಲ್ಲ. ಕಳೆದ ಐದು ವರ್ಷದಿಂದ ಬಿಜೆಪಿ ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ ಎಂಬುದನ್ನು ನಾನು ಹೇಳುವ ಅಗತ್ಯವಿಲ್ಲ. ಅಧಿಕಾರ ಯಾರಿಗೂ ಶಾಶ್ವತವಲ್ಲ ಎಂಬುದನ್ನು ಅಧಿಕಾರದಲ್ಲಿರುವವರು ಮರೆಯಬಾರದು ಎಂದರು.
ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡುವ ಉದ್ದೇಶದಿಂದ ದೆಹಲಿಗೆ ಬಂದಿದ್ದೆ. ಆದರೆ ಎರಡು ದಿನ ಮೊದಲೇ ಅನುಮತಿ ಪಡೆಯಬೇಕೆಂದು ಜೈಲು ಅಧಿಕಾರಿಗಳು ಹೇಳಿದ ಕಾರಣ ಅವರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…