ದೇವಳಗಳಲ್ಲಿ ವಸ್ತ್ರಸಂಹಿತೆ ಅಳವಡಿಸುವ ಬಗ್ಗೆ ಶೀಘ್ರ ತೀರ್ಮಾನ : ಕೋಟ ಶ್ರೀನಿವಾಸ ಪೂಜಾರಿ -Vishwanews24

ಸುಬ್ರಹ್ಮಣ್ಯ: ರಾಜ್ಯ ಮುಜರಾಯಿ ಇಲಾಖೆ ಅಧೀನದ ದೇವಳಗಳಲ್ಲಿ ವಸ್ತ್ರಸಂಹಿತೆ ಅಳವಡಿಸುವ ಬಗ್ಗೆ ಅನೇಕ ಸಂಘಟನೆಗಳ ಕಾರ್ಯಕರ್ತರು ಮನವಿ ನೀಡುತ್ತಿದ್ದಾರೆ. ದೇವಳಗಳ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಈ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಸಂಬಂಧ ಎಲ್ಲ ಅಭಿಪ್ರಾಯ ಪಡೆಯಲಾಗುವುದು. ಭಕ್ತರ ಮೇಲೆ ವಸ್ತ್ರಸಂಹಿತೆಯ ಪರಿಣಾಮ, ವಸ್ತ್ರವಿನ್ಯಾಸದ ಬಗೆ ಮತ್ತು ದೇವಳಗಳ ಧಾರ್ಮಿಕ ವಿಚಾರಗಳನ್ನು ಸಮಗ್ರವಾಗಿ ಪರಿಶೀಲಿಸಿ, ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು. ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ವಸ್ತ್ರಸಂಹಿತೆ ಅಳವಡಿಕೆ ಮಾಡಬೇಕು ಎಂದು ಭಕ್ತರು ಮನವಿ ಮಾಡಿದ್ದಾರೆ ಎಂದರು.

ಶೀಘ್ರ ವ್ಯವಸ್ಥಾಪನಾ ಸಮಿತಿ: ಮುಜರಾಯಿ ವ್ಯಾಪ್ತಿಯ 100ಕ್ಕೂ ಹೆಚ್ಚು ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ಅವಧಿ ಮುಗಿದಿದ್ದು, ಹೊಸ ಸಮಿತಿಗೆ ಅರ್ಜಿ ಕರೆಯಲು ಜಿಲ್ಲಾಧಿಕಾರಿಗಳಿಗೆ ಮಂಗಳವಾರ ಬೆಂಗಳೂರಿನಲ್ಲಿ ನಡೆದ ಧಾರ್ಮಿಕ ಪರಿಷತ್‌ನ ಸಭೆಯಲ್ಲಿ ಸೂಚಿಸಲಾಗಿದೆ. ವಾರದೊಳಗೆ ಪ್ರಕ್ರಿಯೆ ಆರಂಭವಾಗಲಿದೆ. ಧಾರ್ಮಿಕ ಪರಿಷತ್ ಅಂತಿಮವಾಗಿ 9 ಜನರ ತಂಡವನ್ನು ಆಯ್ಕೆ ಮಾಡಲಿದೆ. ಒಟ್ಟು ಪ್ರಕ್ರಿಯೆ ಒಂದು ತಿಂಗಳ ಅವಧಿಯೊಳಗೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ಏ.26ರಂದು ಸಾಮೂಹಿಕ ವಿವಾಹ: ಶಾಸಕರ ನೇತೃತ್ವದಲ್ಲಿ ಸಮಿತಿ ರಚಿಸಿ ಏ.26ರಂದು ಕುಕ್ಕೆ ದೇವಳದಿಂದ ಸಾಮೂಹಿಕ ವಿವಾಹ ನಡೆಯಲಿದೆ. ಆದಿ ಸುಬ್ರಹ್ಮಣ್ಯದಲ್ಲಿ ನಿರ್ಮಿತವಾದ 180 ಕೊಠಡಿಗಳ ವಸತಿಗೃಹವನ್ನು ಮಾ.24ರಂದು ಲೋಕಾರ್ಪಣೆಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು.
ಶಾಸಕ ಎಸ್.ಅಂಗಾರ, ದೇವಳ ಆಡಳಿತಾಧಿಕಾರಿ, ಅಪರ ಜಿಲ್ಲಾಧಿಕಾರಿ ಎಂ.ಜೆ.ರೂಪಾ, ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್., ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪೇರಾಲ್ ಉಪಸ್ಥಿತರಿದ್ದರು.

ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ
ಕುಕ್ಕೆ ದೇವಳದ 400ಕ್ಕೂ ಅಧಿಕ ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು 15 ದಿನದೊಳಗೆ ಅಳವಡಿಸಲು ಸೂಚಿಸಲಾಗಿದೆ. ಮಾಸ್ಟರ್ ಪ್ಲಾನ್ ಯೋಜನೆಯ 68 ಕೋಟಿ ರೂ. ವೆಚ್ಚದ ಚತುಷ್ಪಥ ಕಾಂಕ್ರಿಟ್ ರಸ್ತೆ ಕಾಮಗಾರಿಯನ್ನು ಆಗಸ್ಟ್ ಒಳಗೆ ಪೂರ್ಣಗೊಳಿಸಬೇಕು ಎಂದು ಆದೇಶಿಸಲಾಗಿದೆ. ದೇವಳದ ಸಿಬ್ಬಂದಿಗೆ ಭದ್ರತಾ ವಿಚಾರವಾಗಿ ತರಬೇತಿ ಆಯೋಜಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು “ಪಿಲಿಕೋಲ” – vishwanews24

ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು "ಪಿಲಿಕೋಲ" ಕಾಪು: ತನ್ನದೇ ಆದ ವಿಶಿಷ್ಟ- ವೈಶಿಷ್ಟ್ಯತೆಗಳಿಂ­ದಾಗಿ ಕರಾ­ವಳಿ ಜಿಲ್ಲೆ­ಗಳು ಮಾತ್ರವಲ್ಲದೇ ದೇಶ-ವಿದೇ­ಶ­ಗ­ಳ­ಲ್ಲಿಯೂ…

8 minutes ago

ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: SDPI ಖಂಡನೆ -vishwanews24

ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: ಎಸ್‌ ಡಿ ಪಿ ಐ ಖಂಡನೆ…

1 hour ago

ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂ. ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ – vishwanews24

ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ ಕಾರ್ಕಳದಲ್ಲಿ…

1 hour ago

ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ  ಕೇಂದ್ರ ಸಚಿವರಿಗೆ ಮನವಿ – vishwanews24

ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ  ಕೇಂದ್ರ ಸಚಿವರಿಗೆ ಮನವಿ ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ…

1 hour ago

ಕಟಪಾಡಿ ಅಂಡರ್‌ಪಾಸ್ : ವಾರದೊಳಗೆ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ ಅಂಡರ್‌ಪಾಸ್  ವಾರದೊಳಗೆ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿ: ರಾ. ಹೆ. 66ರ ಕಟಪಾಡಿ ಜಂಕ್ಷನ್‌ನಲ್ಲಿ ಅಂಡರ್‌ಪಾಸ್ ಮತ್ತು ವೆಹಿಕಲ್…

2 hours ago

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ – vishwanews24

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ ಉಡುಪಿ…

2 hours ago