ಸುಬ್ರಹ್ಮಣ್ಯ: ರಾಜ್ಯ ಮುಜರಾಯಿ ಇಲಾಖೆ ಅಧೀನದ ದೇವಳಗಳಲ್ಲಿ ವಸ್ತ್ರಸಂಹಿತೆ ಅಳವಡಿಸುವ ಬಗ್ಗೆ ಅನೇಕ ಸಂಘಟನೆಗಳ ಕಾರ್ಯಕರ್ತರು ಮನವಿ ನೀಡುತ್ತಿದ್ದಾರೆ. ದೇವಳಗಳ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಈ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಸಂಬಂಧ ಎಲ್ಲ ಅಭಿಪ್ರಾಯ ಪಡೆಯಲಾಗುವುದು. ಭಕ್ತರ ಮೇಲೆ ವಸ್ತ್ರಸಂಹಿತೆಯ ಪರಿಣಾಮ, ವಸ್ತ್ರವಿನ್ಯಾಸದ ಬಗೆ ಮತ್ತು ದೇವಳಗಳ ಧಾರ್ಮಿಕ ವಿಚಾರಗಳನ್ನು ಸಮಗ್ರವಾಗಿ ಪರಿಶೀಲಿಸಿ, ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು. ಕುಕ್ಕೆ ಸುಬ್ರಹ್ಮಣ್ಯ ದೇವಳದಲ್ಲಿ ವಸ್ತ್ರಸಂಹಿತೆ ಅಳವಡಿಕೆ ಮಾಡಬೇಕು ಎಂದು ಭಕ್ತರು ಮನವಿ ಮಾಡಿದ್ದಾರೆ ಎಂದರು.
ಶೀಘ್ರ ವ್ಯವಸ್ಥಾಪನಾ ಸಮಿತಿ: ಮುಜರಾಯಿ ವ್ಯಾಪ್ತಿಯ 100ಕ್ಕೂ ಹೆಚ್ಚು ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ಅವಧಿ ಮುಗಿದಿದ್ದು, ಹೊಸ ಸಮಿತಿಗೆ ಅರ್ಜಿ ಕರೆಯಲು ಜಿಲ್ಲಾಧಿಕಾರಿಗಳಿಗೆ ಮಂಗಳವಾರ ಬೆಂಗಳೂರಿನಲ್ಲಿ ನಡೆದ ಧಾರ್ಮಿಕ ಪರಿಷತ್‌ನ ಸಭೆಯಲ್ಲಿ ಸೂಚಿಸಲಾಗಿದೆ. ವಾರದೊಳಗೆ ಪ್ರಕ್ರಿಯೆ ಆರಂಭವಾಗಲಿದೆ. ಧಾರ್ಮಿಕ ಪರಿಷತ್ ಅಂತಿಮವಾಗಿ 9 ಜನರ ತಂಡವನ್ನು ಆಯ್ಕೆ ಮಾಡಲಿದೆ. ಒಟ್ಟು ಪ್ರಕ್ರಿಯೆ ಒಂದು ತಿಂಗಳ ಅವಧಿಯೊಳಗೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಏ.26ರಂದು ಸಾಮೂಹಿಕ ವಿವಾಹ: ಶಾಸಕರ ನೇತೃತ್ವದಲ್ಲಿ ಸಮಿತಿ ರಚಿಸಿ ಏ.26ರಂದು ಕುಕ್ಕೆ ದೇವಳದಿಂದ ಸಾಮೂಹಿಕ ವಿವಾಹ ನಡೆಯಲಿದೆ. ಆದಿ ಸುಬ್ರಹ್ಮಣ್ಯದಲ್ಲಿ ನಿರ್ಮಿತವಾದ 180 ಕೊಠಡಿಗಳ ವಸತಿಗೃಹವನ್ನು ಮಾ.24ರಂದು ಲೋಕಾರ್ಪಣೆಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು.
ಶಾಸಕ ಎಸ್.ಅಂಗಾರ, ದೇವಳ ಆಡಳಿತಾಧಿಕಾರಿ, ಅಪರ ಜಿಲ್ಲಾಧಿಕಾರಿ ಎಂ.ಜೆ.ರೂಪಾ, ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್., ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪೇರಾಲ್ ಉಪಸ್ಥಿತರಿದ್ದರು.
ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ
ಕುಕ್ಕೆ ದೇವಳದ 400ಕ್ಕೂ ಅಧಿಕ ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು 15 ದಿನದೊಳಗೆ ಅಳವಡಿಸಲು ಸೂಚಿಸಲಾಗಿದೆ. ಮಾಸ್ಟರ್ ಪ್ಲಾನ್ ಯೋಜನೆಯ 68 ಕೋಟಿ ರೂ. ವೆಚ್ಚದ ಚತುಷ್ಪಥ ಕಾಂಕ್ರಿಟ್ ರಸ್ತೆ ಕಾಮಗಾರಿಯನ್ನು ಆಗಸ್ಟ್ ಒಳಗೆ ಪೂರ್ಣಗೊಳಿಸಬೇಕು ಎಂದು ಆದೇಶಿಸಲಾಗಿದೆ. ದೇವಳದ ಸಿಬ್ಬಂದಿಗೆ ಭದ್ರತಾ ವಿಚಾರವಾಗಿ ತರಬೇತಿ ಆಯೋಜಿಸುವ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…