Featured

ದೇವಸ್ಥಾನಗಳನ್ನು ಒಡೆದು ಹಾಕಿ ; ವಿವಾದಿತ ಹೇಳಿಕೆ ನೀಡಿದ ಎಚ್.ಡಿ ರೇವಣ್ಣ

ತಾವು ಏನೇ ಕೆಲಸ ಮಾಡಲಿಕ್ಕಿದ್ದರೂ ಸಹ ಜ್ಯೋತಿಷ್ಯರ, ವಾಸ್ತು ತಜ್ಞರ ಸಲಹೆ ಪಡೆಯೋ, ದೇವಸ್ಥಾನಗಳಿಗೆ ತೆರಳಿ ದೇವರ ದರ್ಶನ ಪಡೆದು ಸದಾ ಸುದ್ದಿಯಲ್ಲಿರುವ ಎಚ್.ಡಿ.ಕುಮಾರಸ್ವಾಮಿಯವರ ಸಚಿವ ಸಂಪುಟದಲ್ಲಿ ಲೋಕೋಪಯೋಗಿ ಸಚಿವರಾಗಿರುವ ಎಚ್.ಡಿ.ರೇವಣ್ಣ ಅವರು ಈ ಬಾರಿ ದೇವಸ್ಥಾನಗಳನ್ನು ಕೆಡವುವ ಬಗ್ಗೆ ವಿವಾದಿತ ಹೇಳಿಕೆಯೊಂದನ್ನು ನೀಡಿ ಹಿಂದೂಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಧಾರವಾಡ ನಗರದ ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ನಡೆದ ಪ್ರಾಕೃತಿಕ ವಿಕೋಪ ಹಾಗೂ ಮಳೆಯಿಂದಾಗಿ ಆದ ಹಾನಿ ಪರಿಶೀಲನಾ ಸಭೆಯಲ್ಲಿ ಎಚ್.ಡಿ. ರೇವಣ್ಣ ಅವರು ಹುಬ್ಬಳ್ಳಿ – ಧಾರವಾಡ ನಡುವಿನ ಬಿ.ಆರ್.ಟಿ.ಎಸ್ ಯೋಜನೆಗೆ ದೇವಸ್ಥಾನಗಳು ಅಡ್ಡಿಯಾಗಿದ್ದಲ್ಲಿ ಅದಕ್ಕೆಲ್ಲಾ ತಲೆ ಕೆಡಿಸಿಕೊಳ್ಳದೆ ಒಡೆದು ಹಾಕಿ ಎಂದು ಅಧಿಕಾರಿಗಳಿಗೆ ಸರಕಾರದಲ್ಲಿ ಉನ್ನತ ಸ್ಥಾನದಲ್ಲಿರುವ ರೇವಣ್ಣ ಅವರು ಬೇಜವಾಬ್ದಾರಿಯಾಗಿ ಹೇಳಿ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ನನ್ನ ಕೆಲಸ ಏನಿದ್ದರೂ ರೋಡ್ ಮಾಡಿಸೋದು ಮಾತ್ರ –

ಹಲವಾರು ಅಭಿಪ್ರಾಯಗಳು ಕೇಳಿಬರುತ್ತಿದೆ. ಪ್ರತ್ಯೇಕ ಬಜೆಟ್ ಮಂಡನೆ ಬಗ್ಗೆ ಸಿದ್ದರಾಮಯ್ಯನವರ ಹಾಗೂ ಮೈತ್ರಿಕೂಟದ ಹಲವು ನಾಯಕರ ನಡುವೆ ಜಟಾಪಟಿಗೆ ಕಾರಣವಾಗಿದೆ . ಈಗ ಇದರ ಬಗ್ಗೆ ಲೋಕೋಪಯೋಗಿ ಸಚಿವರಾಗಿರುವ ಎಚ್ ಡಿ ರೇವಣ್ಣ ಅವರು ತಮ್ಮ ಅಭಿಪ್ರಾಯವನ್ನು ಹೇಳಿದ್ದು ಸಮ್ಮಿಶ್ರ ಸರಕಾರದಲ್ಲಿ ಪೂರ್ಣ ಬಜೆಟ್ ಆಗಬೇಕೋ ಬೇಡವೋ ಅಥವಾ ಪೂರಕ ಬಜೆಟ್ ಮಂಡಿಸಬೇಕು ಎಂಬುದನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ತೀರ್ಮಾನಿಸುತ್ತಾರೆ. ಅದರಲ್ಲಿ ನಾನು ತಲೆ ಹಾಕುವುದಿಲ್ಲ ನನ್ನದೇನಿದ್ದರೂ ರಸ್ತೆ ಗುಂಡಿ ಮುಚ್ಚುವುದು, ರಸ್ತೆ ಮಾಡುವದಷ್ಟೇ ಕೆಲಸ ಎಂದು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ .

ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಬಜೆಟ್ ಮಂಡನೆ ಬಗ್ಗೆ ಹೇಳಿರುವ ಅಭಿಪ್ರಾಯದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಎಚ್.ಡಿ.ರೇವಣ್ಣ ಅವರು ನನ್ನ ಇಲಾಖೆ ಬಗ್ಗೆ ಮಾತ್ರ ಮಾತನಾಡುತ್ತೇನೆ, ಯಾವ ಬಜೆಟ್ ಬೇಕೆನ್ನುವುದನ್ನು ಮುಖ್ಯಮಂತ್ರಿಗಳು ನಿರ್ಧರಿಸುತ್ತಾರೆ. ಪೂರ್ಣ ಬಜೆಟ್ ಅಥವಾ ಪೂರಕ ಬಜೆಟ್ ಬಗ್ಗೆ ಸಲಹೆ ಕೇಳಿದ್ರೆ ಮಾತ್ರ ಅವರಿಗೆ ಹೇಳುತ್ತೇನೆ ಎಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

5 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

6 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

6 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

6 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

7 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

7 hours ago