Featured

ದೇವಸ್ಥಾನಗಳ ಆದಾಯದ 10% ಮೊತ್ತವನ್ನು ಗೋಶಾಲೆಗಳ ಅಭಿವೃದ್ಧಿಗೆ ಮೀಸಲಿರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ : ಯಶ್‌ಪಾಲ್ ಸುವರ್ಣ -Vishwanews24

ದೇವಸ್ಥಾನಗಳ ಆದಾಯದ 10% ಮೊತ್ತವನ್ನು ಗೋಶಾಲೆಗಳ ಅಭಿವೃದ್ಧಿಗೆ ಮೀಸಲಿರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ : ಯಶ್‌ಪಾಲ್ ಸುವರ್ಣ -Vishwanews24

ರಾಜ್ಯದಲ್ಲಿ ಗೋ ಸಂರಕ್ಷಣೆಯ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವ ಗೋಶಾಲೆಗಳಿಗೆ ಆರ್ಥಿಕಶಕ್ತಿ ತುಂಬುವ ನಿಟ್ಟಿನಲ್ಲಿ ರಾಜ್ಯ ಸರಕಾರ ವಿಶೇಷ ಮುತುವರ್ಜಿ ವಹಿಸಿ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯ ಎ ಮತ್ತು ಬಿ ವರ್ಗದ ದೇವಸ್ಥಾನಗಳ ಆದಾಯದ ೧೦% ವನ್ನು ಗೋಶಾಲೆಗಳಿಗೆ ವಿನಿಯೋಗಿಸಲು ಈ ಬಾರಿಯ ಬಜೆಟ್‌ನಲ್ಲಿ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಹಾಗೂ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಯವರಿಗೆ ಮನವಿ ಸಲ್ಲಿಸಿರುವುದಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಎ ಸುವರ್ಣ ತಿಳಿಸಿದ್ದಾರೆ.

ಭಾರತದ ಸಂಸ್ಕೃತಿಯಲ್ಲಿ ಗೋವುಗಳಿಗೆ ಪ್ರಧಾನ ಪಾತ್ರವಿದೆ. ಹಲವಾರು ಕಾರಣಗಳಿಂದ ಅನಾಥವಾಗುವ ಗೋವುಗಳ ರಕ್ಷಣೆಯ ಸದುದ್ದೇಶದಿಂದ ನಮ್ಮ ರಾಜ್ಯದಲ್ಲಿ ಹಲವಾರು ಗೋಶಾಲೆಗಳು ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ ಸರಕಾರ ಗೋ ಸಂರಕ್ಷಣೆಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದರೂ, ಗೋಶಾಲೆಗಳು ಆರ್ಥಿಕವಾಗಿ ತೀರ ಸಂಕಷ್ಟ ಪರಿಸ್ಥಿತಿಯಲ್ಲಿ ಗೋರಕ್ಷಣೆಯ ಸೇವೆಯಲ್ಲಿ ತೊಡಗಿಸಿಕೊಂಡಿದೆ.

ಈಗಾಗಲೇ ಈ ಮಹತ್ವದ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಗೋಶಾಲೆಗಳಿಗೆ ಆರ್ಥಿಕ ಚೈತನ್ಯ ನೀಡುವ ಉದ್ದೇಶದಿಂದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯ ಎ ಮತ್ತು ಬಿ ವರ್ಗದ ದೇವಸ್ಥಾನಗಳ ಆದಾಯದ ೧೦% ವನ್ನು ಗೋಶಾಲೆಗಳಿಗೆ ವಿನಿಯೋಗಿಸಲು ಆದೇಶ ನೀಡಿದಲ್ಲಿ ಕೋಟ್ಯಾಂತರ ರೂಪಾಯಿ ಅನುದಾನದ ಸಂಗ್ರಹವಾಗಲಿದ್ದು ಈ ಮೂಲಕ ಗೋಸಂರಕ್ಷಣೆಯಲ್ಲಿ ನಿರತವಾಗಿರುವ ಗೋಶಾಲೆಗಳ ಅಭಿವೃದ್ಧಿಗೆ ಹಾಗೂ ರಾಜ್ಯ ಸರಕಾರ ಪ್ರತಿ ಜಿಲ್ಲೆಗಳಲ್ಲೂ ಗೋಶಾಲೆಗಳನ್ನು ಆರಂಭಿಸುವ ಯೋಜನೆಗೂ ಸಹಕಾರವಾಗಲಿದೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

4 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

4 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

4 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

4 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

7 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

7 hours ago