ರಾಜ್ಯದಲ್ಲಿ ಗೋ ಸಂರಕ್ಷಣೆಯ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವ ಗೋಶಾಲೆಗಳಿಗೆ ಆರ್ಥಿಕಶಕ್ತಿ ತುಂಬುವ ನಿಟ್ಟಿನಲ್ಲಿ ರಾಜ್ಯ ಸರಕಾರ ವಿಶೇಷ ಮುತುವರ್ಜಿ ವಹಿಸಿ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯ ಎ ಮತ್ತು ಬಿ ವರ್ಗದ ದೇವಸ್ಥಾನಗಳ ಆದಾಯದ ೧೦% ವನ್ನು ಗೋಶಾಲೆಗಳಿಗೆ ವಿನಿಯೋಗಿಸಲು ಈ ಬಾರಿಯ ಬಜೆಟ್‌ನಲ್ಲಿ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಹಾಗೂ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಯವರಿಗೆ ಮನವಿ ಸಲ್ಲಿಸಿರುವುದಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಎ ಸುವರ್ಣ ತಿಳಿಸಿದ್ದಾರೆ.
ಭಾರತದ ಸಂಸ್ಕೃತಿಯಲ್ಲಿ ಗೋವುಗಳಿಗೆ ಪ್ರಧಾನ ಪಾತ್ರವಿದೆ. ಹಲವಾರು ಕಾರಣಗಳಿಂದ ಅನಾಥವಾಗುವ ಗೋವುಗಳ ರಕ್ಷಣೆಯ ಸದುದ್ದೇಶದಿಂದ ನಮ್ಮ ರಾಜ್ಯದಲ್ಲಿ ಹಲವಾರು ಗೋಶಾಲೆಗಳು ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ ಸರಕಾರ ಗೋ ಸಂರಕ್ಷಣೆಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದರೂ, ಗೋಶಾಲೆಗಳು ಆರ್ಥಿಕವಾಗಿ ತೀರ ಸಂಕಷ್ಟ ಪರಿಸ್ಥಿತಿಯಲ್ಲಿ ಗೋರಕ್ಷಣೆಯ ಸೇವೆಯಲ್ಲಿ ತೊಡಗಿಸಿಕೊಂಡಿದೆ.
ಈಗಾಗಲೇ ಈ ಮಹತ್ವದ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಗೋಶಾಲೆಗಳಿಗೆ ಆರ್ಥಿಕ ಚೈತನ್ಯ ನೀಡುವ ಉದ್ದೇಶದಿಂದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯ ಎ ಮತ್ತು ಬಿ ವರ್ಗದ ದೇವಸ್ಥಾನಗಳ ಆದಾಯದ ೧೦% ವನ್ನು ಗೋಶಾಲೆಗಳಿಗೆ ವಿನಿಯೋಗಿಸಲು ಆದೇಶ ನೀಡಿದಲ್ಲಿ ಕೋಟ್ಯಾಂತರ ರೂಪಾಯಿ ಅನುದಾನದ ಸಂಗ್ರಹವಾಗಲಿದ್ದು ಈ ಮೂಲಕ ಗೋಸಂರಕ್ಷಣೆಯಲ್ಲಿ ನಿರತವಾಗಿರುವ ಗೋಶಾಲೆಗಳ ಅಭಿವೃದ್ಧಿಗೆ ಹಾಗೂ ರಾಜ್ಯ ಸರಕಾರ ಪ್ರತಿ ಜಿಲ್ಲೆಗಳಲ್ಲೂ ಗೋಶಾಲೆಗಳನ್ನು ಆರಂಭಿಸುವ ಯೋಜನೆಗೂ ಸಹಕಾರವಾಗಲಿದೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…