Featured

ದೇವಸ್ಥಾನಗಳ ಹುಂಡಿ ಹಣ ಹಿಂದೂ ಧಾರ್ಮಿಕ ಆಚರಣೆಗಳಿಗೆ ಮಾತ್ರ ಬಳಕೆ: ಸಿದ್ದರಾಮಯ್ಯ ಸ್ಪಷ್ಟನೆ – VIshwanews24

ದೇವಸ್ಥಾನಗಳ ಹುಂಡಿ ಹಣ ಹಿಂದೂ ಧಾರ್ಮಿಕ ಆಚರಣೆಗಳಿಗೆ ಮಾತ್ರ ಬಳಕೆ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಹಿಂದೂಯೇತರ ಸಮುದಾಯಗಳಿಗೆ ಹಿಂದೂ ದೇವಸ್ಥಾನಗಳ  ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ ಎನ್ನುವ ಬಿಜೆಪಿ  ನಾಯಕರ ಆರೋಪ ಸಂಪೂರ್ಣ ಕಪೋಲಕಲ್ಪಿತವಾಗಿದ್ದು ಅಮಾಯಕ ಹಿಂದೂಗಳನ್ನು ನಮ್ಮ ಸರ್ಕಾರದ ವಿರುದ್ಧ ಎತ್ತಿಕಟ್ಟುವ ದುರುದ್ದೇಶದಿಂದ ಬಿಜೆಪಿ ನಾಯಕರು ಇಂತಹ ಕ್ಷುಲಕ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಗ್ದಾಳಿ ಮಾಡಿದ್ದಾರೆ.

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕ ವಿಚಾರವಾಗಿ ಬಿಜೆಪಿ ನಾಯಕ ಆರೋಪಕ್ಕೆ ತಿರುಗೇಟು ನೀಡಿದ ಅವರು, “ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಸಂಬಂಧಪಟ್ಟಂತೆ ಮಾತ್ರವೇ ಬಳಸಲಾಗುತ್ತದೆ” ಎಂದು ಸ್ಪಷ್ಟನೆ ನೀಡಿದ್ದಾರೆ.

“ಈ ನಿಧಿಯು 2003ರಲ್ಲಿ ಕಾಯಿದೆಯು ಜಾರಿಗೆ ಬಂದಾಗಿನಿಂದ ಧಾರ್ಮಿಕ ಕಾರ್ಯಗಳಿಗೆ ಮಾತ್ರವೇ ಬಳಕೆಯಾಗುತ್ತಿದ್ದು ಭವಿಷ್ಯದಲ್ಲಿಯೂ ಅದಕ್ಕೆ ಮಾತ್ರವೇ ಬಳಕೆಯಾಗಲಿದೆ. ಬೇರೆ ಯಾವುದೇ ಧರ್ಮದ ಜನರ ಅನುಕೂಲಕ್ಕಾಗಿ ಈ ಹಣವನ್ನು ಬಳಸಲಾಗುವುದಿಲ್ಲ. ದೇವಸ್ಥಾನಗಳ ಹಣವನ್ನು ಕೇವಲ ಹಿಂದೂ ಸಮುದಾಯದ ಏಳಿಗೆ ಮತ್ತು ಕಲ್ಯಾಣಕ್ಕೆ ಮಾತ್ರವೇ ಬಳಸಬೇಕೆನ್ನುವ ಬಾಧ್ಯತೆಯನ್ನು ಈ ನಿಧಿಯ ನಿಬಂಧನೆಗಳಲ್ಲಿ ಒತ್ತಿ ಹೇಳಲಾಗಿದೆ.” ಎಂದು ಕಿಡಿ ಕಾರಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

3 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

3 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

4 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

4 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

4 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

5 hours ago