ದೇವಸ್ಥಾನದಲ್ಲಿ ಜಾರಿ ಬಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ; ಪಕ್ಕೆಲುಬಿಗೆ ಪೆಟ್ಟು – vishwanews24
ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಎಚ್.ಡಿ.ರೇವಣ್ಣ: ಪಕ್ಕೆಲುಬಿಗೆ ಪೆಟ್ಟು , ಐಸಿಯುನಲ್ಲಿ ಚಿಕಿತ್ಸೆ
ಹಾಸನ : ಮಾಜಿ ಸಚಿವ, ಶಾಸಕ ಎಚ್.ಡಿ.ರೇವಣ್ಣ ಅವರು ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಗಾಯ ಮಾಡಿಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಹರದನಹಳ್ಳಿ ದೇವಾಲಯದಲ್ಲಿ ಘಟನೆ ನಡೆದಿದೆ.
ಏಕಾದಶಿ ಪ್ರಯುಕ್ತ ಉಪವಾಸವಿದ್ದ ಎಚ್.ಡಿ.ರೇವಣ್ಣ ಬಿದ್ದು ಅವರ ಪಕ್ಕೆಲುಬಿಗೆ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹರದನಹಳ್ಳಿಯ ದೇವೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬರುವ ವೇಳೆ ಜಾರಿ ಬಿದ್ದಿದ್ದಾರೆ. ಹರದನಹಳ್ಳಿಯಿಂದ ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ದೇವಾಲಯಕ್ಕೆ ಹೊರಟಿದ್ದರು ಈ ವೇಳೆ ಘಟನೆ ನಡೆದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಂಚೆಯುಟ್ಟು ಬಂದಿದ್ದ ರೈತನಿಗೆ ಅವಮಾನಿಸಿದ್ದ ಜಿಟಿ ಮಾಲ್ ಆಡಳಿತ ಮಂಡಳಿಯಿಂದ ಸನ್ಮಾನ – vishwanews24
ತೀವ್ರ ಪಕ್ಕೆಲುಬು ನೋವಿನ ಹಿನ್ನೆಲೆ ಹೊಳೆನರಸೀಪುರದ ತಾಲೂಕು ಆಸ್ಪತ್ರೆಗೆ ಎಚ್.ಡಿ.ರೇವಣ್ಣ ಅವರನ್ನು ದಾಖಲು ಮಾಡಲಾಗಿದೆ. ಉಪವಾಸ ಹಾಗೂ ತೀವ್ರ ಪಕ್ಕೆಲುಬು ನೋವಿನ ಕಾರಣ ಸುಸ್ತಾಗಿದ್ದಾರೆ. ಎಚ್.ಡಿ.ರೇವಣ್ಣಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
