Featured

ದೇವಸ್ಥಾನದ ಆಸ್ತಿ ದೇವರಿಗೆ ಸೇರಿದ್ದು, ಭೂ ದಾಖಲೆಯಲ್ಲಿ ಅರ್ಚಕರ ಹೆಸರು ಉಲ್ಲೇಖ ಬೇಡ : ಸುಪ್ರೀಂ -Vishwanews24

ದೇವಸ್ಥಾನದ ಆಸ್ತಿ ದೇವರಿಗೆ ಸೇರಿದ್ದು, ಭೂ ದಾಖಲೆಯಲ್ಲಿ ಅರ್ಚಕರ ಹೆಸರು ಉಲ್ಲೇಖ ಬೇಡ : ಸುಪ್ರೀಂ

ಅರ್ಚಕರು ಪೂಜೆ ಮಾಡಲು ಮಾತ್ರ ಸೀಮಿತ  ..

ನವದೆಹಲಿ : ದೇವಸ್ಥಾನಕ್ಕೆ ಸೇರಿದ ಭೂಮಿಯ ಮಾಲೀಕತ್ವದ ವಿಚಾರಕ್ಕೆ ಸಂಬಂಧಪಟ್ಟಂತೆ ಭೂ ದಾಖಲೆಗಳಲ್ಲಿ ದೇವಾಲಯದಲ್ಲಿ ಪ್ರತಿಷ್ಠಾಪನೆಗೊಂಡಿರುವ ದೇವರ ಹೆಸರು ಮಾತ್ರ ಉಲ್ಲೇಖಕ್ಕೆ ಅರ್ಹ, ಅರ್ಚಕರು ಪೂಜೆ ಮಾಡಲು ಮಾತ್ರ ಸೀಮಿತವಾಗಿರುತ್ತಾರೆ ಎಂದು ಸೋಮವಾರ ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

” ದೇವರೇ ಭೂಮಿಯ ಮಾಲೀಕನಾಗಿರುವುದರಿಂದ ದೇವರ ಆಸ್ತಿಯನ್ನು ನಿರ್ವಹಣೆ ಮಾಡುವ ಖಾತರಿದಾರರಾಗಿ ಮಾತ್ರ ಪೂಜಾರಿ/ಅರ್ಚಕರು ಇರಲಿದ್ದಾರೆ. ಹೀಗಾಗಿ ಭೂ ದಾಖಲೆಗಳಲ್ಲಿ ಪೂಜಾರಿ ಅಥವಾ ವ್ಯವಸ್ಥಾಪಕರ ಹೆಸರನ್ನು ಉಲ್ಲೇಖಿಸಲೇಬೇಕು ಎಂಬ ಅಗತ್ಯವಿಲ್ಲ. ದೇವರೇ ಭೂಮಿಯ ಸ್ವಾಮ್ಯ ಹೊಂದಿರುವುದರಿಂದ ದೇವರ ಸೇವಕರಾಗಿರುವವರು ಅಥವಾ ವ್ಯವಸ್ಥಾಪಕರು ಅದನ್ನು ಅನುಭೋಗಿಸುತ್ತಾರೆ ಅಷ್ಟೇ” ಎಂದು ನ್ಯಾಯಮೂರ್ತಿಗಳಾದ ಹೇಮಂತ್‌ ಗುಪ್ತ ಮತ್ತು ಎ ಎಸ್‌ ಬೋಪಣ್ಣ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.

ಮಧ್ಯಪ್ರದೇಶ ಕಂದಾಯ ಕಾನೂನು ಸಂಹಿತೆ 1959ರ ಅಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ವಜಾಗೊಳಿಸಿದ್ದ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ವಿಶೇಷ ಮೇಲ್ಮನವಿಗಳ ವಿಚಾರಣೆಯನ್ನು ಪೀಠ ನಡೆಸಿತು.

ಕಾನೂನುಬಾಹಿರವಾಗಿ ಪೂಜಾರಿಗಳು ದೇವಸ್ಥಾನದ ಆಸ್ತಿಯನ್ನು ಮಾರಾಟ ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ದೇವಸ್ಥಾನದ ಭೂ ದಾಖಲೆಯಲ್ಲಿ ಪೂಜಾರಿಗಳ ಹೆಸರನ್ನು ತೆಗೆದು ಹಾಕುವ ಸಂಬಂಧ ಸರ್ಕಾರವು ಕಾರ್ಯಕಾರಿ ಸೂಚನೆಗಳನ್ನು ಒಳಗೊಂಡ ಸುತ್ತೋಲೆ ಹೊರಡಿಸಿತ್ತು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

2 days ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

2 days ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

2 days ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago