ನವದೆಹಲಿ : ದೇವಸ್ಥಾನಕ್ಕೆ ಸೇರಿದ ಭೂಮಿಯ ಮಾಲೀಕತ್ವದ ವಿಚಾರಕ್ಕೆ ಸಂಬಂಧಪಟ್ಟಂತೆ ಭೂ ದಾಖಲೆಗಳಲ್ಲಿ ದೇವಾಲಯದಲ್ಲಿ ಪ್ರತಿಷ್ಠಾಪನೆಗೊಂಡಿರುವ ದೇವರ ಹೆಸರು ಮಾತ್ರ ಉಲ್ಲೇಖಕ್ಕೆ ಅರ್ಹ, ಅರ್ಚಕರು ಪೂಜೆ ಮಾಡಲು ಮಾತ್ರ ಸೀಮಿತವಾಗಿರುತ್ತಾರೆ ಎಂದು ಸೋಮವಾರ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.
” ದೇವರೇ ಭೂಮಿಯ ಮಾಲೀಕನಾಗಿರುವುದರಿಂದ ದೇವರ ಆಸ್ತಿಯನ್ನು ನಿರ್ವಹಣೆ ಮಾಡುವ ಖಾತರಿದಾರರಾಗಿ ಮಾತ್ರ ಪೂಜಾರಿ/ಅರ್ಚಕರು ಇರಲಿದ್ದಾರೆ. ಹೀಗಾಗಿ ಭೂ ದಾಖಲೆಗಳಲ್ಲಿ ಪೂಜಾರಿ ಅಥವಾ ವ್ಯವಸ್ಥಾಪಕರ ಹೆಸರನ್ನು ಉಲ್ಲೇಖಿಸಲೇಬೇಕು ಎಂಬ ಅಗತ್ಯವಿಲ್ಲ. ದೇವರೇ ಭೂಮಿಯ ಸ್ವಾಮ್ಯ ಹೊಂದಿರುವುದರಿಂದ ದೇವರ ಸೇವಕರಾಗಿರುವವರು ಅಥವಾ ವ್ಯವಸ್ಥಾಪಕರು ಅದನ್ನು ಅನುಭೋಗಿಸುತ್ತಾರೆ ಅಷ್ಟೇ” ಎಂದು ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತ ಮತ್ತು ಎ ಎಸ್ ಬೋಪಣ್ಣ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.
ಮಧ್ಯಪ್ರದೇಶ ಕಂದಾಯ ಕಾನೂನು ಸಂಹಿತೆ 1959ರ ಅಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ವಜಾಗೊಳಿಸಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ವಿಶೇಷ ಮೇಲ್ಮನವಿಗಳ ವಿಚಾರಣೆಯನ್ನು ಪೀಠ ನಡೆಸಿತು.
ಕಾನೂನುಬಾಹಿರವಾಗಿ ಪೂಜಾರಿಗಳು ದೇವಸ್ಥಾನದ ಆಸ್ತಿಯನ್ನು ಮಾರಾಟ ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ದೇವಸ್ಥಾನದ ಭೂ ದಾಖಲೆಯಲ್ಲಿ ಪೂಜಾರಿಗಳ ಹೆಸರನ್ನು ತೆಗೆದು ಹಾಕುವ ಸಂಬಂಧ ಸರ್ಕಾರವು ಕಾರ್ಯಕಾರಿ ಸೂಚನೆಗಳನ್ನು ಒಳಗೊಂಡ ಸುತ್ತೋಲೆ ಹೊರಡಿಸಿತ್ತು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…