ಮೈಸೂರು: ದೇವಾಲಯಗಳ ನೆಲಸಮ ವಿಚಾರವಾಗಿ ಸುಪ್ರೀಂ ಕೋರ್ಟ್ ನಿರ್ದೇಶನ ಹಾಗೂ ಅದರ ಸಾಧಕ ಬಾಧಕಗಳನ್ನು ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಸದ್ಯಕ್ಕೆ ದೇವಾಲಯ ನೆಲಸಮ ವಿಚಾರಕ್ಕೆ ಸಿಎಂ ತಾತ್ಕಾಲಿಕ ತಡೆ ನೀಡಿದ್ದಾರೆ. ಎರಡು ದಿನಗಳಲ್ಲಿ ಈ ವಿಚಾರ ತೀರ್ಮಾನ ಆಗಲಿದೆ ಎಂದು ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.
ಹುಚ್ಚಗಣಿ ದೇಗುಲ ನೆಲಸಮ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಇದು ಸಿಎಂ ಹಾಗೂ ಕಂದಾಯ ಸಚಿವರ ಗಮನಕ್ಕೆ ಬಂದಿದೆ. ಜಿಲ್ಲಾಡಳಿತಕ್ಕೆ ಸರ್ಕಾರ ನೊಟೀಸ್ ನೀಡಿದೆ. ನೊಟೀಸ್ ಗೆ ಉತ್ತರ ಬಂದ ಬಳಿಕ ಅಧಿಕಾರಿಗಳ ಮೇಲೆ ಕ್ರಮ ಜರುಗಿಸುವ ವಿಚಾರವನ್ನು ಸಿಎಂ ನಿರ್ಧರಿಸುತ್ತಾರೆ ಎಂದರು.
ದೇಗುಲ ನೆಲಸಮ ವಿರೋಧಿಸಿ ಹಿಂದೂ ಪರ ಸಂಘಟನೆಗಳಿಂದ ಎಲ್ಲಾ ಕಡೆ ಪ್ರತಿಭಟನೆ, ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಸೋಮಶೇಖರ್, ಇದರಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಪೊಲೀಸರು ಪರಿಸ್ಥಿತಿ ಮೇಲೆ ನಿಗಾ ಇಟ್ಟಿದ್ದಾರೆ. ಈ ಬೆಳವಣಿಗೆಗಳಿಂದ ಸರ್ಕಾರಕ್ಕೆ ಮುಜುಗರ ಉಂಟಾಗುವ ಪ್ರಶ್ನೆಯೇ ಬರಲ್ಲ. ಎರಡು ದಿನಗಳಲ್ಲಿ ಎಲ್ಲವೂ ಸುಖಾಂತ್ಯ ಆಗಲಿದೆ ಎಂದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…