ಬ್ರಹ್ಮಾವರ: ದೇವಾಡಿಗ ಸಮಾಜದ ಸಮಗ್ರ ಅಭಿವೃದ್ಧಿಗಾಗಿ ‘ರಾಜ್ಯ ದೇವಾಡಿಗ ಅಭಿವೃದ್ಧಿ ನಿಗಮ’ ಸ್ಥಾಪಿಸಬೇಕು, ಈ ಕುರಿತು ಮುಖ್ಯ ಮಂತ್ರಿಗೆ ಮನವಿ ಸಲ್ಲಿಸಬೇಕು’ ಎಂಬ ಅಭಿಪ್ರಾಯ ಇಲ್ಲಿನ ಬಾರ್ಕೂರು ಏಕನಾಥೇಶ್ವರೀ ದೇವಸ್ಥಾನದಲ್ಲಿ ನಡೆದ ರಾಜ್ಯದ 58 ದೇವಾಡಿಗ ಸಮಾಜದವರ ಸಭೆಯಲ್ಲಿ ನಿರ್ಧರಿಸಲಾಯಿತು.
ದೇವಾಡಿಗ ಸಮಾಜವು ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿದೆ. ಆದರೆ, ಸಾಂಸ್ಕೃತಿಕವಾಗಿ ಶ್ರೀಮಂತವಾಗಿದೆ. ಸಮಾಜವನ್ನು ಸರ್ಕಾರ ಗುರುತಿಸುವಂತೆ ಮಾಡಲು ಅಭಿವೃದ್ಧಿ ನಿಗಮದ ರಚನೆ ಅಗತ್ಯ ಎಂದು ದೇವಾಡಿಗ ಸಮಾಜದ ಮೋಹನ್‌ದಾಸ್ ಹಿರಿಯಡ್ಕ ಹೇಳಿದರು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಕಾರ್ಯಾಧ್ಯಕ್ಷ ಡಾ.ಕೆ.ದೇವರಾಜ್ ಮಂಗಳೂರು ಮಾತನಾಡಿ, ರಾಜ್ಯದಲ್ಲಿ ದೇವಾಡಿಗ ಸಮಾಜದ ಜನಸಂಖ್ಯೆ 6 ಲಕ್ಷಕ್ಕೂ ಹೆಚ್ಚಿದೆ. ಸಂಘಟಿತ ಪ್ರಯತ್ನದಿಂದ ಸಮಾಜಕ್ಕೆ ಶಕ್ತಿ ಬರುತ್ತದೆ. ಈ ಹಿನ್ನೆಲೆಯಲ್ಲಿ ಸಮಾಜಕ್ಕೆ ಅಭಿವೃದ್ಧಿ ನಿಗಮ ಬೇಕು ಎಂದರು.
ದೇವಳದ ಆಡಳಿತ ವಿಶ್ವಸ್ಥ ಅಣ್ಣಯ್ಯ ಶೇರಿಗಾರ್ ಅಧ್ಯಕ್ಷತೆ ವಹಿಸಿದ್ದರು. ಬಿ.ಆರ್.ದೇವಾಡಿಗ, ಕೆ.ಚಂದ್ರಶೇಖರ್, ರಜನಿಕಾಂತ್, ರಮೇಶ್ ವಂಡ್ಸೆ, ಡಾ.ಸುಂದರ್ ಮೊಯ್ಲಿ, ರವೀಂದ್ರ ಮೊಯ್ಲಿ, ಗಣೇಶ್ ದೇವಾಡಿಗ, ವಿಜಯ ಕೊಡವೂರು, ಶಂಕರ ಅಂಕದಕಟ್ಟೆ ಮತ್ತಿತರರು ಇದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…