ಕನ್ನಡದ `ಕಾಂತಾರ’ ಚಿತ್ರದ ‘ವರಾಹ ರೂಪಂ’ ಹಾಡಿನ ವಿವಾದಕ್ಕೆ ಜಯ ಸಿಕ್ಕಿದೆ. ಹಾಡಿನ ವಿರುದ್ಧ ಕೃತಿಚೌರ್ಯದ ಆರೋಪ ಮಾಡಿದ್ದ ಥೈಕ್ಕುಡಂ ಬ್ರಿಡ್ಜ್ ಅರ್ಜಿಯನ್ನು ವಜಾಗೊಳಿಸಿದ್ದ ಕೇರಳದ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿತ್ತು. ಇದೀಗ ಎಲ್ಲಾ ತಡೆಯಾಜ್ಞೆ ತೆರವುಗೊಳಿಸಲಾಗಿದೆ.
ಸಿನಿಮಾದಲ್ಲಿ ಹಾಡು ಬಳಸದಂತೆ ತಡೆಯಾಜ್ಞೆ ನೀಡಲಾಗಿತ್ತು. ಕೇರಳದ ಪಾಲಕ್ಕಾಡ್ ಕೋರ್ಟ್ ಕೂಡ ತಡೆಯಾಜ್ಞೆಯನ್ನು ತೆರವುಗೊಳಿಸಿದೆ. ಇತ್ತ ಕೋಝಿಕ್ಕೋಡ್ ಕೋರ್ಟ್ ಆದೇಶಕ್ಕೆ ನೀಡಿದ್ದ ತಡೆಯನ್ನೂ ಕೇರಳ ಹೈಕೋರ್ಟ್ ತೆರವುಗೊಳಿಸಿದ್ದು, ಕೆಳಹಂತದ ನ್ಯಾಯಾಲಯದ ನಿಲುವನ್ನು ಎತ್ತಿ ಹಿಡಿದಿದೆ.
`ಕಾಂತಾರ’ ಚಿತ್ರದ ವರಾಹ ರೂಪಂ ಹಾಡಿನ ಬಳಕೆಗೆ ಕೇರಳದ ಹೈಕೋರ್ಟ್ ಅನುಮತಿ ನೀಡಿದೆ. ಕೋಝಿಕ್ಕೋಡ್ ನ್ಯಾಯಲಯ ಕೂಡ ಈ ಹಿಂದೆ ತಡೆಯಾಜ್ಞೆ ತೆರವು ಮಾಡಿತ್ತು. ಇಂದು ಕೇರಳದ ಪಾಲಕ್ಕಾಡ್ ನ್ಯಾಯಲಯದಲ್ಲೂ ತಡೆಯಾಜ್ಞೆ ತೆರವು ಮಾಡಿದೆ. ಈ ಮೂಲಕ `ಕಾಂತಾರ’ ಸಿನಿ ಪ್ರೇಮಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಇದರೊಂದಿಗೆ ‘ಕಾಂತಾರ ‘ಚಿತ್ರದ ‘ವರಾಹ ರೂಪಂ’ ಹಾಡಿಗೆ ಇದ್ದ ಎಲ್ಲಾ ಅಡೆತಡೆ ನಿವಾರಣೆ ಆಗಿದೆ.
ಇದೀಗ ನಟ ರಿಷಬ್ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ. “ದೇವಾನು ದೈವಗಳ ಆಶೀರ್ವಾದ ಹಾಗೂ ಜನರ ಅಭಿಮಾನದಿಂದ ವರಾಹರೂಪಂ ಕೇಸ್ ಗೆದ್ದಿದ್ದೇವೆ ಜನರ ಕೋರಿಕೆಯನ್ನು ಪರಿಗಣಿಸಿ ಅತಿ ಶೀಘ್ರದಲ್ಲಿ ಒಟಿಟಿನಲ್ಲಿ ಹಾಡು ಬದಲಾಯಿಸಲಿದ್ದೇವೆ” ಎಂದು ರಿಷಬ್ ಟ್ವೀಟ್ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…