ಬೆಂಗಳೂರು: ದೇವೇಗೌಡರ ಕಣ್ಣಲ್ಲಿ ನೀರು ಹಾಕಿಸಿದವರು ನಾಶ ಆಗ್ತಾರೆ. ಎಲ್ಲರೂ ನಾಶ ಆಗುತ್ತಾರೆ. ಈಗ ಅದೇ ಆಗುತ್ತಿದೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಬಳಿ ಇರುವ ದಾಖಲೆ ಬಿಟ್ಟರೆ 5-6 ಸಚಿವರು ರಾಜೀನಾಮೆ ಕೊಡಬೇಕಾಗುತ್ತದೆ. ನನ್ನನ್ನು ಜೈಲಿಗೆ ಕಳುಹಿಸಲು ಸರ್ಕಾರ ಹುನ್ನಾರ ನಡೆಸಿದೆ. 12 ವರ್ಷದ ಹಳೆಯ ಕೇಸಲ್ಲಿ ಜೈಲಲ್ಲಿ ಕಳುಹಿಸೋಕೆ ಸಾಧ್ಯವಿಲ್ಲ. ರಾಜೀನಾಮೆ ನೀಡುವ ಸ್ಥಿತಿ ಬಂದರೆ ನಾನೇ ಕೊಡುತ್ತೇನೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಎಸ್‌ಐಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಆರೋಪಿಸಿದ ಅವರು, ಮಾನ್ಯತಾ ಟೆಕ್ ಪಾರ್ಕ್ ಬಳಿ 38 ಫ್ಲೋರ್ ಮನೆ ಕಟ್ಟುತ್ತಿದ್ದಾರೆ. ಈ ಹಿಂದೆ ಚಂದ್ರಶೇಖರ್ ಮೇಲೆ ಎಫ್‌ಐಆರ್ ಆಗಿದೆ. ಅವರ ವಿರುದ್ಧ ತನಿಖೆ ಮಾಡಬೇಕು ಎಂದು ಸವಾಲು ಹಾಕಿದ ಅವರು ಕೇಂದ್ರದ ಗೃಹ ಕಾರ್ಯದರ್ಶಿಗೂ ದೂರು ನೀಡುವುದಾಗಿ ಎಚ್ಚರಿಸಿದ್ದಾರೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…