Featured

ದೇವೇಗೌಡರ ವಿರುದ್ಧ ಸ್ಪರ್ಧೆಗೆ ನಾನು ಸಿದ್ದ, ಗೆಲ್ಲುವ ವಿಶ್ವಾಸ ನನಗಿದೆ : ಡಿ.ವಿ.ಸದಾನಂದಗೌಡ – Vishwanews24

ಬೆಂಗಳೂರು,:ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದರೂ ಯಾವುದೇ ರೀತಿಯ ಭಯಪಡದೆ ದೊಡ್ಡವರ ಜತೆ ಸ್ಪರ್ಧೆ ಮಾಡಲು ನಾನು ಸಿದ್ಧನಾಗಿದ್ದೇನೆ ಎಂದು ಕೇಂದ್ರ ಸಚಿವ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಸ್ಪಷ್ಟಪಡಿಸಿದರು.

ಇದುವರೆಗೂ ನನಗಿಂತ ಚಿಕ್ಕವರ ಜತೆ ಸ್ಪರ್ಧೆ ಮಾಡಿ ಗೆದ್ದಿದ್ದೇನೆ. ಒಂದು ವೇಳೆ ದೇವೇಗೌಡರು ಸ್ಪರ್ಧಿಸಿದರೂ ನನಗೆನೂ ಭಯವಿಲ್ಲ. ಅದನ್ನು ಗೌರವಯುತವಾಗಿ ಸ್ವೀಕರಿಸಿ ಗೆಲ್ಲುವ ವಿಶ್ವಾಸ ನನಗಿದೆ ಎಂದರು.

ತಮ್ಮ ಐದು ವರ್ಷಗಳ ಮೌಲ್ಯಮಾಪನ ಕುರಿತಂತೆ ಪತ್ರಿಕಾಗೋಷ್ಠಿ ನಡೆಸಿದ ಅವರು, ನಾನು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಬೇರೊಂದು ಕಡೆ ವಲಸೆ ಹೋಗುತ್ತೇನೆ ಎಂದು ಸುದ್ದಿ ಹಬ್ಬಿಸುತ್ತಿರುವವರು ದೇಶ ದ್ರೋಹಿಗಳು. ಪಕ್ಷ ಟಿಕೆಟ್ ನೀಡಿದರೆ ಅಲ್ಲಿಂದಲೇ ಸ್ಪರ್ಧಿಸುತ್ತೇನೆ. ಈ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವುದು ನನಗೆ ಮುಖ್ಯ ಹೊರತು. ನನ್ನ ಹಿತಾಸಕ್ತಿ ಮುಖ್ಯವಲ್ಲ ಎಂದು ಪುನರುಚ್ಛರಿಸಿದರು.

ಬೇರೆ ಪಕ್ಷಗಳಿಗಿಂತ ಬಿಜೆಪಿ ಯಾವಾಗಲೂ ಚುನಾವಣೆಯಲ್ಲಿ ಮುಂಚೂಣಿಯಲ್ಲಿರುತ್ತದೆ. ಬೇರೆಯವರು ಏನು ಮಾಡುತ್ತಿದ್ದಾರೆ ಎಂಬುದರ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ನಾವು ಮಾಡಿರುವ ಕೆಲಸಗಳೇ ನಮಗೆ ಶ್ರೀರಕ್ಷೆಯಾಗುತ್ತದೆ. ಬೆಂಗಳೂರು ಉತ್ತರ ವಿಭಾಗದ ಜನತೆ ನನ್ನನ್ನು ಮತ್ತೊಮ್ಮೆ ಕೈ ಹಿಡಿಯಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ತಾವು ಐದು ವರ್ಷಗಳ ಅವಧಿಯಲ್ಲಿ ಕೇಂದ್ರ ಸಚಿವರಾಗಿ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಳನ್ನು ಮಾಧ್ಯಮಗಳ ಮುಂದೆ ಹಂಚಿಕೊಂಡರು. ನಾನು ಕೇಂದ್ರ ಸಚಿವನಾಗಿ ಈ ಭಾಗದ ಜನತೆಗೆ ಯಾವೆಲ್ಲ ಆಶ್ವಾಸನೆ ಕೊಟ್ಟಿದ್ದೆನೋ ಅದನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ.

ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ಶೌಚಾಲಯ, ಸ್ತ್ರೀ ಶಕ್ತಿ ಸಂಘಟನೆಗಳ ಸಬಲೀಕರಣ ಸೇರಿದಂತೆ ನಾನಾ ರೀತಿಯ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ ಎಂದು ಹೇಳಿದರು.

ರಕ್ಷಣಾ ಇಲಾಖೆಯಲ್ಲಿ ಅನೇಕ ವರ್ಷಗಳಿಂದ ಸಾಧ್ಯವಾಗದ ಕೆಲಸವನ್ನು ನಾನು ಸಚಿವನಾದ ಮೇಲೆ ಮಾಡಿಕೊಟ್ಟಿದ್ದೇನೆ. ಯಶವಂತಪುರದಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆ, ಜಾಲಹಳ್ಳಿಯಲ್ಲಿ ಪಾಸ್‍ಪೋರ್ಟ್ ಕೇಂದ್ರ ಕಚೇರಿ, ಜನೌಷಧಿ ಕೇಂದ್ರ ಸ್ಥಾಪನೆ, ಆನ್‍ಲೈನ್ ಮೂಲಕ ಜನೌಷಧಿಗಳನ್ನು ಸಾರ್ವಜನಿಕರಿಗೆ ತಲುಪಿಸುವ ವ್ಯವಸ್ಥೆ, 12 ಆದರ್ಶ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಿಕೊಟ್ಟಿರುವುದಾಗಿ ತಿಳಿಸಿದರು.

ಕ್ಷೇತ್ರದಾದ್ಯಂತ ನಿರುದ್ಯೋಗಿ ಯುವಕರಿಗೆ ಉದ್ಯೋಗ ಮೇಳ ಏರ್ಪಡಿಸಿ ದುಡಿಯುವ ಕೈಗಳಿಗೆ ಕೆಲಸ ನೀಡಲಾಗಿದೆ. ಹಿರಿಯರು, ಮಹಿಳೆಯರು, ಮಕ್ಕಳು ಸೇರಿದಂತೆ ಮತ್ತಿತರರಿಗೆ ವೈದ್ಯಕೀಯ ಸೌಲಭ್ಯ ಒದಗಿಸಲು ವೈದ್ಯಕೀಯ ಶಿಬಿರ, ಯುವಕರ ಕ್ರೀಡೆಗೆ ಪ್ರೋತ್ಸಾಹಿಸಲು ಮಲ್ಲೇಶ್ವರಂನಲ್ಲಿ ವಾಲಿಬಾಲ್ ಒಳಾಂಗಣ ಕ್ರೀಡಾಂಗಣ, ಕುಡಿಯುವ ನೀರು, ಬಸ್ ನಿಲ್ದಾಣ ಸೇರಿದಂತೆ ಕ್ಷೇತ್ರಕ್ಕೆ ಅಗತ್ಯವಾದ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿರುವ ತೃಪ್ತಿ ಇದೆ.

ನಾನು ಮಾಡಿರುವ ಕೆಲಸಗಳು ಸಮಾಧಾನ ತಂದಿರುವುದರಿಂದ ಜನತೆ ನನ್ನ ಕೈಹಿಡಿಯುತ್ತಾರೆ ಎಂಬ ವಿಶ್ವಾಸವಿದೆ ಪ್ರಧಾನಿ ನರೇಂದ್ರ ಮೋದಿ ಅವರು ಜನತೆಗೆ ನಾವು ಏನು ಮಾಡಿದ್ದೇವೆ ಎಂಬುದನ್ನು ಮೌಲ್ಯಮಾಪನದ ಮೂಲಕ ತಿಳಿಸಬೇಕೆಂದು ಸೂಚಿಸಿದ್ದರು. ಅದರಂತೆ ಐದು ವರ್ಷಗಳ ಅವಧಿಯಲ್ಲಿ ನಮ್ಮಿಂದ ಎಷ್ಟು ಸಾಧ್ಯವೋ ಅಷ್ಟನ್ನು ಈಡೇರಿಸುವಂತಹ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದರು. ಡಾ.ಅಶ್ವತ್ ನಾರಾಯಣ, ವಿಧಾನಪರಿಷತ್ ಸದಸ್ಯರಾದ ನಾರಾಯಣಸ್ವಾಮಿ, ಲೆಹರ್ ಸಿಂಗ್, ಮಾಜಿ ಶಾಸಕ ಮುನಿರಾಜು, ಅಶ್ವಥ್ ನಾರಾಯಣ, ಎ.ಎಚ್.ಆನಂದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago