ಮೈಸೂರು: “ಸಾವರ್ಕರ್ ಆರ್ಎಸ್ಎಸ್ನ ಆರಾಧ್ಯ ದೈವ, ಆತನ ಕೊಡುಗೆ ದೇಶಕ್ಕೆ ಶೂನ್ಯ” ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ನಗರದಲ್ಲಿ ನಡೆದ ಸಿಎಎ ವಿರುದ್ಧದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗಿಯಾಗಿದ್ದ ಸಿದ್ದರಾಮಯ್ಯ, ಅವನ ಹೆಸರು ದಾಮೋದರ ಸಾವರ್ಕರ್. ಆದರೆ, ಆರ್ಎಸ್ಎಸ್ನವರು ಅವನಿಗೆ ವೀರ ಸಾವರ್ಕರ್ ಎಂದು ಹೆಸರಿಟ್ಟಿದ್ದಾರೆ. ಸಾವರ್ಕರ್ ಸ್ವಾತಂತ್ರ್ಯ ಹೋರಾಟದ ಕಾರಣಕ್ಕಾಗಿ ಜೈಲಿಗೆ ಹೋಗಿಲ್ಲ. ಸಾವರ್ಕರ್ ತನ್ನ ಇಂಗ್ಲೆಂಡ್ ಮೂಲದ ಸ್ನೇಹಿತನ ಕಾರಣಕ್ಕಾಗಿ ಜೈಲಿಗೆ ಹೋಗಿದ್ದ ಎಂದರು.
ಆರ್ಎಸ್ಎಸ್ನಲ್ಲಿ ಒಬ್ಬನೇ ಒಬ್ಬ ಕೂಡ ಸ್ವಾತಂತ್ರ್ಯ ಹೋರಾಟ ಮಾಡಿಲ್ಲ. ದೇಶಕ್ಕಾಗಿ ಆರ್ಎಸ್ಎಸ್ನ ಯಾರು ತಮ್ಮ ಪ್ರಾಣತ್ಯಾಗ ಮಾಡಿಲ್ಲ. ಅಂಡಮಾನ್ ಜೈಲಿಗೆ ಹೋಗಿದ್ದ ಸಾವರ್ಕರ್, ನಾನು ತಪ್ಪು ಮಾಡುವುದಿಲ್ಲ. ನನ್ನನ್ನು ಜೈಲಿನಿಂದ ಬಿಡುಗಡೆ ಮಾಡಿ ಎಂದು ಬ್ರಿಟೀಷರಿಗೆ ಮನವಿ ಪತ್ರ ಬರೆದಿದ್ದ ಎಂದರು ಸಿದ್ದರಾಮಯ್ಯ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕ್ರೂರತ್ವ ತುಂಬಿದೆ. ಇಲ್ಲಿ ಮಾನವೀಯತೆಗೆ ಬೆಲೆ ಇಲ್ಲ. ಕೇವಲ ಕ್ರೂರತೆ ತುಂಬಿರುವ ಸರ್ಕಾರ. ಪೌರತ್ವ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ವಿರೋಧಿಸುವವರು ದೇಶದ್ರೋಹಿಗಳು ಎನ್ನುವುದಾದರೆ ಸಂವಿಧಾನದ ವಿರುದ್ಧ ಇರುವ ನಿಮ್ಮನ್ನು ಏನೆಂದು ಕರೆಯಬೇಕು? ಎಂದು ಪ್ರಶ್ನಿಸಿದ್ದಾರೆ.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…