Featured

ದೇಶಕ್ಕಾಗಿ ಬಜರಂಗದಳ ಕಾರ್ಯಕರ್ತರು ರೌಡಿಯಾಗಲು ಯಾವತ್ತೂ ಸಿದ್ಧ , ಈ ಹೋರಾಟ ನಿರಂತರ  : ಸುನಿಲ್.ಕೆ.ಆರ್ – vishwanews24

ದೇಶಕ್ಕಾಗಿ ಬಜರಂಗದಳ ಕಾರ್ಯಕರ್ತರು ರೌಡಿಯಾಗಲು ಯಾವತ್ತೂ ಸಿದ್ಧ , ಈ ಹೋರಾಟ ನಿರಂತರ  : ಸುನಿಲ್.ಕೆ.ಆರ್

ಪುತ್ತೂರು: ಹಿಂದೂ ಕಾರ್ಯಕರ್ತರ ವಿರುದ್ಧ ಗಡಿಪಾರು ನೊಟೀಸ್ ನೀಡಿರುವ ಪೊಲೀಸ್ ಇಲಾಖೆ ಕ್ರಮವನ್ನು ಖಂಡಿಸಿ ಪುತ್ತೂರಿನ ಅಮರ್ ಜವಾನ್‌ ಜ್ಯೋತಿ ವೃತ್ತದ ಬಳಿ ಇಂದು ಬೆಳಿಗ್ಗೆ ವಿಶ್ವಹಿಂದೂ ಪರಿಷತ್, ಬಜರಂಗದಳದಿಂದ ಪ್ರತಿಭಟನೆ ನಡೆಯತು.

ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ ಬಜರಂಗದಳ ಮುಖಂಡ ಸುನಿಲ್.ಕೆ.ಆರ್ ಅವರು, ದೇಶಕ್ಕಾಗಿ ಬಜರಂಗದಳದ ಕಾರ್ಯಕರ್ತರು ರೌಡಿಯಾಗಲು ಯಾವತ್ತೂ ಸಿದ್ಧವಾಗಿದ್ದಾರೆ. ಬಜರಂಗದಳದ ಕಾರ್ಯಕರ್ತರು ಅತ್ಯಾಚಾರ, ದರೋಡೆ ಮಾಡಿ ರೌಡಿ ಪಟ್ಟ ಕಟ್ಟಿಕೊಂಡವರಲ್ಲ, ಗೋ ಮಾತೆ, ನಮ್ಮ ಅಕ್ಕ-ತಂಗಿಯಂದಿರ ರಕ್ಷಣೆಗಾಗಿ ಕೇಸು ಹಾಕಿಸಿಕೊಂಡವರು. ಈ ಹೋರಾಟಗಳು ನಿರಂತರವಾಗಿ ನಡೆಯಲಿದೆ ಎಂದರು.

ಹಿಂದೂ ಕಾರ್ಯಕರ್ತರನ್ನ ಗಡಿಪಾರು ಮಾಡಿದರೆ ಹಿಂದೂ ಸಂಘಟನೆಗಳನ್ನು ವಿಚಲಿತಗೊಳಿಸಬಹುದು ಎನ್ನುವ ಭ್ರಮೆ ಬೇಡ. ಅಲ್ಪಸಂಖ್ಯಾತರ ತುಷ್ಠೀಕರಣಕ್ಕಾಗಿ ಈ ರೀತಿಯ ಕೃತ್ಯ ಮಾಡಬೇಡಿ. ನಮ್ಮ ಕಾರ್ಯಕರ್ತರನ್ನು ಗಡಿಪಾರು ಮಾಡಿದಲ್ಲಿ ಸಂಘಟನೆಯಿಂದ ದೂರ ಉಳಿಯುತ್ತಾರೆ ಎಂದು ಸರಕಾರ, ಪೊಲೀಸ್ ಇಲಾಖೆ ತಿಳಿದುಕೊಂಡಿದೆ. ಆದರೆ ಇದು ಯಾವತ್ತೂ ಸಾಧ್ಯವಿಲ್ಲ. ಕಾರ್ಯಕರ್ತರ ಮೇಲಿನ ಗಡಿಪಾರು ನೊಟೀಸ್ ತಕ್ಷಣ ವಾಪಾಸು ಪಡೆಯಬೇಕು. ತಪ್ಪಿದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಕಾರ್ಯಕರ್ತರು ರಾಜ್ಯ ಸರಕಾರದ ವಿರುದ್ಧ ದಿಕ್ಕಾರ ಕೂಗಿದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

19 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

20 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

20 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

21 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

21 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

21 hours ago