ಕಲಬುರಗಿ: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಗುಣವೇ ಸುಳ್ಳು ಹೇಳುವುದು. ದೇಶಕ್ಕಾಗಿ ಹುತಾತ್ಮರಾದ ರಾಜೀವ್ ಗಾಂಧಿ ಬಗ್ಗೆ ಈ ರೀತಿ ಕೀಳಾಗಿ ಮಾತನಾಡುವುದು ಸರಿಯಲ್ಲ. ಮೋದಿಗೆ ಹೃದಯವು ಇಲ್ಲ, ದೇಶ ಪ್ರೇಮವೂ ಇಲ್ಲ ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀವ್ ಗಾಂಧಿ ನಂಬರ್ ಒನ್ ಭ್ರಷ್ಟನಾಗಿ ಸಾವನ್ನಪ್ಪಿದ್ದಾರೆ ಎನ್ನುವ ಮೋದಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದರು. 30 ವರ್ಷಗಳ ಹಿಂದೆಯೇ ಈ ವಿಚಾರವನ್ನು ಹೈಕೋರ್ಟ್ ವಜಾಗೊಳಿಸಿದೆ. ಆದರೂ ಮೋದಿ ಈ ವಿಚಾರ ತೆಗೆಯುವುದು ತೀವ್ರ ಖಂಡನೀಯ ಎಂದರು.
ಮೋದಿಗೆ ಯಾವ ವಿಚಾರ ಮಾತನಾಡಬೇಕು ಎನ್ನುವ ಪ್ರಜ್ಞೆಯೂ ಇಲ್ಲ. ಇಂಥವರು ನಮ್ಮ ದೇಶದ ಪ್ರಧಾನಿಯಾಗಿ ಇರುವುದು ದೇಶದ ಜನರ ದುರ್ದೈವವಾಗಿದೆ. ಕೇವಲ ಮಾತಿನಿಂದ ಮರುಳು ಮಾಡುವವರಿಗೆ ಈ ಬಾರಿ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ದೇಶದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 40 ಸ್ಥಾನಗಳನ್ನೂ ಗೆಲ್ಲುವುದಿಲ್ಲ ಎಂದು ಹೇಳಿರುವ ಮೋದಿಗೆ ರಾಜಕೀಯ ಪರಿಜ್ಞಾನವಿಲ್ಲ ಎಂದು ಕುಟುಕಿದರು. ಅಮೇಥಿಯಲ್ಲಿ ರಾಹುಲ್‍ಗಾಂಧಿ, ರಾಯ್‍ಬರೇಲಿಯಲ್ಲಿ ಸೋನಿಯಾಗಾಂಧಿ ಸೋಲುತ್ತಾರೆ ಎಂದು ಹೇಳುತ್ತಿರುವ ಮೋದಿಯವರು ಎರಡೂ ಕ್ಷೇತ್ರದಲ್ಲಿ ಅವರಿಬ್ಬರೂ ಗೆದ್ದರೆ ನರೇಂದ್ರ ಮೋದಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಿದ್ದಾರೆಯೇ ಎಂದು ಖರ್ಗೆ ಸವಾಲು ಹಾಕಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…