Featured

ದೇಶಕ್ಕಾಗಿ ಹುತಾತ್ಮರಾದ ರಾಜೀವ್ ಗಾಂಧಿ ಬಗ್ಗೆ ಈ ರೀತಿ ಕೀಳಾಗಿ ಮಾತನಾಡುವುದು ಸರಿಯಲ್ಲ : ಮಲ್ಲಿಕಾರ್ಜುನ ಖರ್ಗೆ -Vishwanews24

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಗುಣವೇ ಸುಳ್ಳು ಹೇಳುವುದು. ದೇಶಕ್ಕಾಗಿ ಹುತಾತ್ಮರಾದ ರಾಜೀವ್ ಗಾಂಧಿ ಬಗ್ಗೆ ಈ ರೀತಿ ಕೀಳಾಗಿ ಮಾತನಾಡುವುದು ಸರಿಯಲ್ಲ. ಮೋದಿಗೆ ಹೃದಯವು ಇಲ್ಲ, ದೇಶ ಪ್ರೇಮವೂ ಇಲ್ಲ ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀವ್ ಗಾಂಧಿ ನಂಬರ್ ಒನ್ ಭ್ರಷ್ಟನಾಗಿ ಸಾವನ್ನಪ್ಪಿದ್ದಾರೆ ಎನ್ನುವ ಮೋದಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದರು. 30 ವರ್ಷಗಳ ಹಿಂದೆಯೇ ಈ ವಿಚಾರವನ್ನು ಹೈಕೋರ್ಟ್ ವಜಾಗೊಳಿಸಿದೆ. ಆದರೂ ಮೋದಿ ಈ ವಿಚಾರ ತೆಗೆಯುವುದು ತೀವ್ರ ಖಂಡನೀಯ ಎಂದರು.

ಮೋದಿಗೆ ಯಾವ ವಿಚಾರ ಮಾತನಾಡಬೇಕು ಎನ್ನುವ ಪ್ರಜ್ಞೆಯೂ ಇಲ್ಲ. ಇಂಥವರು ನಮ್ಮ ದೇಶದ ಪ್ರಧಾನಿಯಾಗಿ ಇರುವುದು ದೇಶದ ಜನರ ದುರ್ದೈವವಾಗಿದೆ. ಕೇವಲ ಮಾತಿನಿಂದ ಮರುಳು ಮಾಡುವವರಿಗೆ ಈ ಬಾರಿ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ದೇಶದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 40 ಸ್ಥಾನಗಳನ್ನೂ ಗೆಲ್ಲುವುದಿಲ್ಲ ಎಂದು ಹೇಳಿರುವ ಮೋದಿಗೆ ರಾಜಕೀಯ ಪರಿಜ್ಞಾನವಿಲ್ಲ ಎಂದು ಕುಟುಕಿದರು. ಅಮೇಥಿಯಲ್ಲಿ ರಾಹುಲ್‍ಗಾಂಧಿ, ರಾಯ್‍ಬರೇಲಿಯಲ್ಲಿ ಸೋನಿಯಾಗಾಂಧಿ ಸೋಲುತ್ತಾರೆ ಎಂದು ಹೇಳುತ್ತಿರುವ ಮೋದಿಯವರು ಎರಡೂ ಕ್ಷೇತ್ರದಲ್ಲಿ ಅವರಿಬ್ಬರೂ ಗೆದ್ದರೆ ನರೇಂದ್ರ ಮೋದಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಿದ್ದಾರೆಯೇ ಎಂದು ಖರ್ಗೆ ಸವಾಲು ಹಾಕಿದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

24 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago