ನವದೆಹಲಿ : “ದೇಶಕ್ಕೆ ತ್ವರಿತ ಹಾಗೂ ಸಂಪೂರ್ಣ ವ್ಯಾಕ್ಸಿನೇಷನ್ನ ಅಗತ್ಯವಿದೆಯೇ ಹೊರತು ಬಿಜೆಪಿ ಸರ್ಕಾರದ ಸುಳ್ಳು ಹಾಗೂ ಟೊಳ್ಳಾದ ಘೋಷಣೆಗಳಲ್ಲ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಕೇಂದ್ರ ಸರ್ಕಾರದ ನಿಷ್ಕ್ರಿಯತೆಯಿಂದ ಲಸಿಕೆಯ ಕೊರತೆಯಾಗಿದೆ. ದೇಶಕ್ಕೆ ತ್ವರಿತ ಹಾಗೂ ಸಂಪೂರ್ಣ ವ್ಯಾಕ್ಸಿನೇಷನ್ನ ಅವಶ್ಯಕತೆ ಇದೆ. ಬಿಜೆಪಿಯ ಸುಳ್ಳು ಹಾಗೂ ಟೊಳ್ಳು ಘೋಷಣೆಗಳಲ್ಲ” ಎಂದು ಟೀಕಿಸಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿ ಅವರ ಘನತೆ ಉಳಿಸಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ. ಈ ಯತ್ನಗಳು ಸೋಂಕು ವ್ಯಾಪಿಸಲು ಮತ್ತಷ್ಟು ಅವಕಾಶ ನೀಡುತ್ತಿದೆ. ಜನರು ಸಾಯುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.
ವಿಜ್ಞಾನಿಗಳ ಅನುಮತಿ ಇಲ್ಲದೇ ಸರ್ಕಾರವು ಅಸ್ಪ್ರಾಜೆನೆಕಾ ಲಸಿಕೆಯ ಎರಡು ಡೋಸ್ಗಳ ನಡುವಿನ ಅಂತರವನ್ನು ಏರಿಸಿದೆ ಎಂದು ಆರೋಪಿಸಿರುವ ವರದಿಯನ್ನು ಕೂಡಾ ರಾಹುಲ್ ಗಾಂಧಿ ಅವರು ಟ್ವೀಟ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…