ಜಾಗತಿಕ ತಾಪಮಾನ ಕೈಗಾರಿಕಾ ಕ್ರಾಂತಿ ಅವಧಿಯ ಹಿಂದಿನ ಮಟ್ಟ (ಪ್ರಿ ಇಂಡಸ್ಟ್ರಿಯಲ್ ಲೆವಲ್) ಕ್ಕಿಂತ 2 ಡಿಗ್ರಿ ಜಾಸ್ತಿಯಾದರೆ ಭಾರತಕ್ಕೆ ಈ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಐಪಿಸಿಸಿ ಹೇಳಿದೆ.
ನಾಗ್ಪುರ: ದೇಶದಲ್ಲಿಒಂದೆಡೆ ಭಾರಿ ಮಳೆಯಿಂದ ಪ್ರವಾಹವುಂಟಾಗಿ ಹಲವರ ಜೀವನ ದುಸ್ತರವಾಗಿದೆ. ಅಲ್ಲದೆ ತಮಿಳುನಾಡು, ಕೇರಳ, ಕರ್ನಾಟಕದಲ್ಲಿ ಭಾರಿ ಗಾಳಿ ಜತೆ ಮಳೆಯಾಗುವ ಬಗ್ಗೆ ರೆಡ್ ಅಲರ್ಟ್ ಕೂಡ ನೀಡಲಾಗಿದೆ. ಇದರ ಜೊತೆಗೆ ಈಗ ದೇಶಕ್ಕೆ ಮತ್ತೊಂದು ಭೀತಿ ಎದುರಾಗಿದೆ.
2015ರಂತೆ ಈ ವರ್ಷ ಕೂಡ ದೇಶದಲ್ಲಿ ಮಾರಣಾಂತಿಕ ಬಿಸಿಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಹವಾಮಾನ ಬದಲಾವಣೆಯ ಬಗ್ಗೆ ನಡೆದ ಜಾಗತಿಕ ಮಟ್ಟದ ಅತಿ ದೊಡ್ಡ ಅವಲೋಕನ ವರದಿ ಬಹಿರಂಗಪಡಿಸಿದೆ.
2015ರಲ್ಲಿ ಬೀಸಿದ್ದ ಬಿಸಿಗಾಳಿಗೆ ಸುಮಾರು 2,500 ಜನರು ಬಲಿಯಾಗಿದ್ದರು. ಜಾಗತಿಕ ತಾಪಮಾನ ಕೈಗಾರಿಕಾ ಕ್ರಾಂತಿ ಅವಧಿಯ ಹಿಂದಿನ ಮಟ್ಟಕ್ಕಿಂತ 2 ಡಿಗ್ರಿ ಜಾಸ್ತಿಯಾದರೆ ಭಾರತಕ್ಕೆ ಈ ಅಪಾಯ ಕಟ್ಟಿಟ್ಟ ಬುತ್ತಿ ಎಂದು ವರದಿ ಹೇಳಿದೆ. ಇನ್ನು ಈ ವರ್ಷದ ಡಿಸೆಂಬರ್ ತಿಂಗಳಲ್ಲಿ ಪೋಲೆಂಡ್‌ನಲ್ಲಿ ನಡೆಯಲಿರುವ ಕಟೋವೈಸ್ ಹವಾಮಾನ ಬದಲಾವಣೆ ಸಮಾವೇಶದಲ್ಲಿ ಈ ವಿಚಾರವನ್ನು ಚರ್ಚಿಸಲಾಗುವುದು. ಹವಾಮಾನ ಬದಲಾವಣೆಗಳನ್ನು ಎದುರಿಸಲು ಪ್ಯಾರಿಸ್ ಒಪ್ಪಂದದ ಪರಿಶೀಲನೆ ನಡೆಯಲಿದೆ. ಜಗತ್ತಿನಲ್ಲಿ ಅತಿ ಹೆಚ್ಚು ಇಂಗಾಲ ಹೊರಸೂಸುವ ರಾಷ್ಟ್ರಗಳಲ್ಲಿ ಒಂದಾದ ಭಾರತವು ಜಾಗತಿಕ ಸಮ್ಮೇಳನದಲ್ಲಿ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಿದೆ.
ತಾಪಮಾನದಲ್ಲಾಗುತ್ತಿರುವ ಏರಿಕೆಯ ಬಗ್ಗೆ ಎಚ್ಚರಿಕೆಯ ಕರೆ ಗಂಟೆಯನ್ನು ಬಾರಿಸುತ್ತಿರುವ ಜಾಗತಿಕ ತಾಪಮಾನ ಕುರಿತ ವಿಶೇಷ ವರದಿ, ಇದೇ ಗತಿಯಲ್ಲಿ ಉಷ್ಣಾಂಶದಲ್ಲಿ ಏರಿಕೆಯಾಗುತ್ತಿದ್ದರೆ 2030- 2052ರೊಳಗೆ ತಾಪಮಾನ 1.5 ಡಿಗ್ರಿ ಸೆಲ್ಸಿಯಸ್ (ಪ್ರಿ ಇಂಡಸ್ಟ್ರಿಯಲ್ ಲೆವಲ್ ಮೀರಿ) ತಲುಪುವ ಅಪಾಯವಿದೆ ಎಂದು ಹೇಳಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…