ಬೆಂಗಳೂರು, :ಬಲಿಷ್ಠ ನಾಯಕತ್ವ ಮತ್ತು ಬಲಿಷ್ಠ ಸರ್ಕಾರಕ್ಕಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದೇಶದ ಮತದಾರರು ಪ್ರಧಾನಿ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರಲು ಮುಂದಾಗಬೇಕು ಎಂದು ಕೇಂದ್ರ ಸಚಿವ ರಾಮ್‍ವಿಲಾಸ್ ಪಾಸ್ವಾನ್ ಜನತೆಗೆ ಕರೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ”ದೇಶಕ್ಕೆ ಸಮರ್ಥ ನಾಯಕತ್ವದ ಅಗತ್ಯವಿದೆ. ಅದಕ್ಕೆ ಮೋದಿಯವರೇ ಸೂಕ್ತ ವ್ಯಕ್ತಿ. ಭಾರತದ ಗಡಿ ದೇಶಗಳ ಪೈಕಿ ಹೆಚ್ಚಿನವು ನಮಗೆ ವೈರಿಗಳಾಗಿವೆ. ಇಂಥ ಸನ್ನಿವೇಶದಲ್ಲಿ ಸ್ಥಿರ ಸರಕಾರದ ಅವಶ್ಯಕತೆಯೂ ಇದೆ,”ಎಂದರು.
ನರೇಂದ್ರ ಮೋದಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಒಂದೇ ಒಂದೂ ಸಣ್ಣ ಭ್ರಷ್ಟಾಚಾರಕ್ಕೂ ಅವಕಾಶ ನೀಡದೆ ದೇಶವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಮೋದಿಯವರೇ ಪ್ರಧಾನಿಯಾಗಿ ಮುಂದುವರಿಯಬೇಕು. ಹಾಗಾಗಿ ಚುನಾವಣೆಯಲ್ಲಿ ಎನ್‍ಡಿಎ ಮೈತ್ರಿಕೂಟವನ್ನು ಬೆಂಬಲಿಸುವಂತೆ ಕರೆ ಕೊಟ್ಟರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ನಮ್ಮ ಸುತ್ತಮುತ್ತ ವೈರಿಗಳೇ ತುಂಬಿ ತುಳುಕುತ್ತಿದ್ದಾರೆ.
130 ಕೋಟಿ ಜನಸಂಖ್ಯೆ ಹೊಂದಿರುವ ಭಾರತದಂತಹ ಬೃಹತ್ ರಾಷ್ಟ್ರವನ್ನು ಮೋದಿಯಂತಹ ಸಮರ್ಥ ನಾಯಕರು ಮುನ್ನೆಡೆಸಬಲ್ಲರೇ ಹೊರತು ಬೇರೊಬ್ಬರಿಂದ ಅದು ಸಾಧ್ಯವಿಲ್ಲ. ನಮ್ಮ ಸರ್ಕಾರ ಸ್ಪಷ್ಟ ಜನಾದೇಶದೊಂದಿಗೆ ಎರಡನೇ ಬಾರಿಗೆ ಅಧಿಕಾರ ಹಿಡಿಯಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
”ರಾಹುಲ್ ಗಾಂಧಿ ಅವರನ್ನು ಸ್ವೀಕರಿಸಲು ಯಾರೂ ಸಿದ್ಧರಿಲ್ಲ. ಕಾಂಗ್ರೆಸ್ ಪಕ್ಷ ತನ್ನ ರಾಜಕೀಯ ವಿರೋಧಿಗಳು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ. ಮೊರಾರ್ಜಿ ಸರಕಾರ ರಚನೆಯಾದಾಗಲೇ ಅದನ್ನು ಅಸ್ಥಿರಗೊಳಿಸಿದ್ದರು. ತೃತೀಯ ರಂಗ ಸರಕಾರಕ್ಕೂ ಕಾಟ ನೀಡಿದರು. ಅಟಲ್‌ಜಿ ಸರಕಾರವೊಂದೇ ಪೂರ್ಣಾವಧಿ ಪೂರೈಸಿದರೂ ಅಸ್ಥಿರಕ್ಕೆ ನಿರಂತರ ಪ್ರಯತ್ನ ನಡೆಯಿತು. ದೇಶಕ್ಕೆ ಕಾಂಗ್ರೆಸ್ ಮಾಡಿದ್ದೇನು ಎನ್ನುವುದು ಜನತೆಗೆ ಗೊತ್ತಿದೆ,” ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…