ಬೆಂಗಳೂರು: ಈ ದೇಶದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವುದು ಕಾಂಗ್ರೆಸ್ ಪಕ್ಷ ಮಾತ್ರ. ಅದಕ್ಕೆ ರಾಹುಲ್ ಗಾಂಧಿ ಅವರು ಈ ದೇಶದ ಪ್ರಧಾನ ಮಂತ್ರಿ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಜಾರಿಗೊಳಿಸಿ ನುಡಿದಂತೆ ನಡೆದಿದ್ದೇವೆ. ಕಾಂಗ್ರೆಸ್ ಪಕ್ಷಕ್ಕೆ ಈ ದೇಶದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವ ಶಕ್ತಿ ಇದೆ. ಈ ದೇಶದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವುದು ಕಾಂಗ್ರೆಸ್ ಪಕ್ಷ ಮಾತ್ರವಾಗಿದ್ದು, ರಾಹುಲ್ ಗಾಂಧಿ ಅವರು ಈ ದೇಶದ ಪ್ರಧಾನ ಮಂತ್ರಿ ಆಗಬೇಕು ಎಂದರು.
ಯಾರು ಕೂಡ ಈ ದೇಶದಲ್ಲಿ ಭಾರತ್ ಜೋಡೋ ಮಾಡಿರಲಿಲ್ಲ. ಈಗ ಭಾರತ್ ಜೋಡೋ.2 ಪ್ರಾರಂಭ ಮಾಡ್ತಿದ್ದಾರೆ. ಭಾರತ ನ್ಯಾಯ ಯಾತ್ರೆ ಮಾಡ್ತಿದ್ದಾರೆ. ಯಾಕಂದ್ರೆ ಈ ದೇಶದಲ್ಲಿ ಯಾರಿಗೂ ನ್ಯಾಯ ಸಿಕ್ಕಿಲ್ಲ. ಹಿಂದುಳಿದವರಿಗೆ, ದಲಿತರಿಗೆ ನ್ಯಾಯ ಸಿಗಬೇಕು ಅಂತ ಪಾದಯಾತ್ರೆ ಮಾಡ್ತಿದ್ದಾರೆ. ಇಂತವರ ಕೈಗೆ ಅಧಿಕಾರ ಸಿಗಬೇಕೋ ನರೇಂದ್ರ ಮೋದಿಗೆ ಅಧಿಕಾರ ಸಿಗಬೇಕೋ..?. ಹಾಗಾಗಿ ನಾವು ಎಲ್ಲರೂ ಹೋರಾಟ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು. ರಾಹುಲ್ ಗಾಂಧಿ ಪ್ರಧಾನಿ ಆಗಬೇಕು ಎಂದು ಒತ್ತಿ ಹೇಳಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…