ಹುಬ್ಬಳ್ಳಿ: ದೇಶದಲ್ಲಿ ಅಶಾಂತಿಯನ್ನು ಹುಟ್ಟು ಹಾಕುವ ಎಐಎಂಐಎಂ, ಎಸ್‌ಡಿಪಿಐ, ಆರೆಸ್ಸೆಸ್, ಭಜರಂಗದಳ ಎಲ್ಲವನ್ನೂ ಬ್ಯಾನ್ ಮಾಡಿ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸರ್ಕಾರ ಅಶಾಂತಿಯನ್ನುಂಟು ಮಾಡುವ ಯಾವುದೇ ಸಂಘಟನೆಯಾಗಿದ್ದರೂ ಬ್ಯಾನ್ ಮಾಡಲಿ. ಅದರಲ್ಲಿ ಎಐಎಂಐಎಂ, ಎಸ್‌ಡಿಪಿಐ, ಆರೆಸ್ಸೆಸ್, ಭಜರಂಗದಳ ಎಲ್ಲವನ್ನೂ ಬ್ಯಾನ್ ಮಾಡಲಿ ಎಂದರು.
ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ಕುರಿತು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಗೃಹ ಸಚಿವ ಸ್ಥಾನಕ್ಕೆ ಆರಗ ಜ್ಞಾನೇಂದ್ರ ಅನರ್ಹನಾಗಿದ್ದಾನೆ. ನಿಭಾಯಿಸಲು ಆಗದೇ ಇದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಲಿ. ರಾಜ್ಯದಲ್ಲಿ ಗೊಂದಲವನ್ನುಂಟು ಮಾಡುವ ಹೇಳಿಕೆ ನೀಡುವ ಮೂಲಕ ಗೃಹ ಸಚಿವ ಸ್ಥಾನದ ಮರ್ಯಾದೆ ತೆಗೆಯುತ್ತಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಸಿದ್ಧರಾಮಯ್ಯ ಹರಿಹಾಯ್ದರು.
40% ಕಮೀಷನ್ ದಂಧೆಯ ಕುರಿತು ಮಾತನಾಡಿ, ಈಗಾಗಲೇ ಈ ಬಗ್ಗೆ ಸಾಕಷ್ಟು ಮಾತನಾಡಿದ್ದೇವೆ. ಈಗ ಜನರ ಕೈಯಲ್ಲಿಯೇ ಕೊಟ್ಟಿದ್ದೇವೆ. ಮುಂದಿನ ದಿನಗಳಲ್ಲಿ ಅವರೇ ತಕ್ಕ ಉತ್ತರವನ್ನು ನೀಡುವ ಮೂಲಕ ಜನರು ಇದಕ್ಕೆ ತಕ್ಕ ಪಾಠ ಕಲಿಸಬೇಕಿದೆ ಎಂದು ಅವರು ಹೇಳಿದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…