ವಿಜಯಪುರ: ಶ್ರೀಮಂತರು, ಬಡವರ ಮಧ್ಯೆ ಅಂತರ ಹಾಗೆಯೇ ಮುಂದುವರಿಯಲಿ, ಧರ್ಮ ಸಂಘರ್ಷ ನಡೆಯಲಿ ಎಂಬುದು ಬಿಜೆಪಿಯವರ ಉದ್ದೇಶ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದೇಶದಲ್ಲಿ ಈಗ ಹೋರಾಟ ನಡೆಯುತ್ತಿದೆ. ಬ್ರಿಟಿಷರ ವಿರುದ್ಧ ಭಾರತೀಯರಿಗೆ ಜಯ ಸಿಕ್ಕಂತೆ ಈ ಹೋರಾಟದಲ್ಲಿ ನಮಗೆ ಜಯ ಸಿಕ್ಕೆ ಸಿಗಲಿದೆ. ಇಲ್ಲಿ ಯಾರಿಗೂ ಮಾನವೀಯತೆ ಇಲ್ಲ. ಯಾರನ್ನಾದರೂ ಕೊಂದು ಹಾಕುತ್ತಾರೆ. ಮಂಗಳೂರಿನಲ್ಲಿ ಪೊಲೀಸರು ದುರುದ್ದೇಶದಿಂದ ಇಬ್ಬರು ಅಮಾಯಕ ಯುವಕರನ್ನು ಕೊಂದುಹಾಕಿದರು. ಇದು ಕರ್ನಾಟಕ ಮಾತ್ರವಲ್ಲ, ದೇಶಾದ್ಯಂತ ನಡೆಯುತ್ತಿದೆ. ದೇಶದಲ್ಲಿ ಭಯದ ವಾತಾವರಣ ಸೃಷ್ಠಿಸಲಾಗುತ್ತಿದೆ. ಈವರೆಗೆ ದೇಶಾದ್ಯಂತ 100 ಜನ ಸಾವಿಗೀಡಾಗಿದ್ದಾರೆ. ಮೋದಿ ಸೇರಿದಂತೆ ಯಾರಿಂದಲೂ ಹೋರಾಟ ತಡೆಯಲು ಸಾಧ್ಯವಿಲ್ಲ. ಸಿಎಎ ವಿರೋಧಿಗಳು ನಗರ ನಕ್ಸಲ್, ದೇಶ ವಿರೋಧಿಗಳು ಎಂದು ಬಿಂಬಿಸುತ್ತೀರ ಎಂದು ಪ್ರಶ್ನೆ ಮಾಡಿದರು.
ಸಂವಿಧಾನ ರದ್ದು ಮಾಡಲು ಬಿಜೆಪಿಯವರು ಏನಾದರೂ ಕೈ ಹಾಕಿದರೆ ಈ ದೇಶದಲ್ಲಿ ರಕ್ತಕ್ರಾಂತಿ ಆಗುತ್ತದೆ. ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ಈ ರೀತಿಯ ಹೋರಾಟಗಳು ನಡೆಯುತ್ತಿದ್ದವು. ಭಾರತೀಯ ಪೌರತ್ವ ಕಾಯ್ದೆಗೆ ತಿದ್ದುಪಡಿಯಾದಾಗಿನಿಂದ ದೇಶಾದ್ಯಂತ ಜನ ಸಿಡಿದೆದ್ದಿದ್ದಾರೆ. ಜನರು ಸಾಮೂಹಿಕವಾಗಿ ಹೋರಾಟ ನಡೆಸುತ್ತಿದ್ದಾರೆ. ಇದನ್ನು ನೋಡಿದರೆ ಈಗ ಮತ್ತೊಂದು ಸ್ವಾತಂತ್ರ್ಯ ಹೋರಾಟ ನಡೆಯುತ್ತಿದೆ ಎಂದರು.
ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ. ಸರ್ಕಾರಕ್ಕೆ ಎಷ್ಟೇ ಬಹುಮತವಿರಲಿ. ಸಂವಿಧಾನ ಬಾಹಿರ ಕಾನೂನು ಮಾಡಿದರೆ ಸಾರ್ವಜನಿಕರು ಹೋರಾಟ ಮಾಡುವ ಹಕ್ಕನ್ನು ಅಂಬೇಡ್ಕರ್ ನೀಡಿದ್ದಾರೆ. ಈ ಹಕ್ಕನ್ನು ದಮನ ಮಾಡಲು ಮೋದಿ, ಶಾಗೆ ಯಾವುದೇ ಅಧಿಕಾರವಿಲ್ಲ ಎಂದರು.
ವಿಶ್ವ ಶ್ರೇಷ್ಠ ಸಂವಿಧಾನವನ್ನು ಬುಡಮೇಲು ಮಾಡಲು ಬಿಜೆಪಿ ಹೊರಟಿದೆ. ಈ ಸಂವಿಧಾನದ ಮೂಲಕ ಕಲ್ಪಿಸಲಾಗಿರುವ ಸಮಾನತೆಯ ವಿರುದ್ಧ ಬಿಜೆಪಿಗೆ ಸಿಟ್ಟಿದೆ. ಒಂದು ವೇಳೆ ಸಂವಿಧಾನ ರದ್ದು ಮಾಡಲು ಬಿಜೆಪಿ ಕೈ ಹಾಕಿದರೆ ದೇಶದಲ್ಲಿ ರಕ್ತಕ್ರಾಂತಿ ನಡೆಯಲಿದೆ. ವಾಜಪೇಯಿ ಪ್ರಧಾನಿಯಾಗಿದ್ದರೂ ಹಿಡನ್ ಅಜೆಂಡಾ ಜಾರಿ ಮಾಡಲಿಲ್ಲ. ಆದರೆ ಇಂದು ಮೋದಿ, ಶಾ ಹಿಡನ್ ಅಜೆಂಡಾ ಜಾರಿ ಮೂಲಕ ಸಂವಿಧಾನ ಬುಡಮೇಲು ಮಾಡಲು ಹೊರಟಿದ್ದಾರೆ. ಸಂವಿಧಾನ ಪರ ಮತ್ತು ವಿರೋಧಿಗಳ ನಡುವೆ ಈಗ ಹೋರಾಟ ನಡೆಯುತ್ತಿದೆ. ಬಿಜೆಪಿಯವರು ಪರಿವರ್ತನೆ ವಿರೋಧಿಗಳು ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…