ದೇಶದಲ್ಲಿ ಎಂದೂ ಕೂಡ ಕಾಣದ ಅಶಾಂತಿಯ ವಾತಾವರಣ ಕಂಡುಬರುತ್ತಿದೆ : ವಿನಯ ಕುಮಾರ್‌ ಸೊರಕೆ -Vishwanews24

ಉಡುಪಿ: ಕೇಂದ್ರ ಸರಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗದವರು ಪಡೆಯುತ್ತಿರುವ ಮೀಸಲಾತಿಯನ್ನು ತೆಗೆಯಲು ಯತ್ನಿಸುತ್ತಿದೆ. ಸವೋಚ್ಚ ನ್ಯಾಯಾಲಯಕ್ಕೆ ಮಾಹಿತಿ ನೀಡದೆ ಸಂವಿಧಾನಕ್ಕೆ ಅಡ್ಡಿಯಾಗುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ದೇಶದಲ್ಲಿ ಎಂದೂ ಕೂಡ ಕಾಣದ ಅಶಾಂತಿಯ ವಾತಾವರಣ ಕಂಡುಬರುತ್ತಿದೆ ಎಂದು ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಹೇಳಿದರು.

ಹಿಂದುಳಿದ ವರ್ಗಗಳ ಮೀಸಲಾತಿಯನ್ನು ರದ್ದುಗೊಳಿಸಲು ಮುಂದಾಗಿರುವ ಕೇಂದ್ರ ಬಿಜೆಪಿ ಸರಕಾರದ ನಿಲುವಿನ ವಿರುದ್ಧ ಉಡುಪಿ ಜಿಲ್ಲಾ ಕಾಂಗ್ರೆಸ್‌ ಹಾಗೂ ಮಹಿಳಾ ಕಾಂಗ್ರೆಸ್‌ ವತಿಯಿಂದ ಸೋಮವಾರ ಅಜ್ಜರಕಾಡು ಹುತಾತ್ಮ ಚೌಕದ ಮುಂಭಾಗ ನಡೆದ ಬೃಹತ್‌ ಪ್ರತಿಭಟನ ಸಭೆಯಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಸಿಎಎ, ಎನ್‌ಆರ್‌ಸಿ ಬಗ್ಗೆ ಹೋರಾ ಟಗಳು ನಡೆಯುತ್ತಿದ್ದರೂ ಕೇಂದ್ರ ಸರಕಾರ ಮಾತ್ರ ಸುಮ್ಮನಿದೆ. ಕೇಂದ್ರ ಗೃಹಸಚಿವರ ಭೇಟಿಗೂ ಅವಕಾಶ ನೀಡುತ್ತಿಲ್ಲ. ಧರ್ಮ, ಭಾಷೆ, ಸಂಸ್ಕೃತಿ ಮೂಲಕ ಜನರ ಮನಸ್ಸನ್ನು ಬೇರೆಡೆ ಸೆಳೆಯುವ ಪ್ರಯತ್ನ ನಡೆಯುತ್ತಿದೆ. ರೈತರ, ನಿರುದ್ಯೋಗ ಸಮಸ್ಯೆಗಳಿಗೆ ಕೇಂದ್ರ ಸರಕಾರದ ಬಳಿ ಯಾವುದೇ ಉತ್ತರವಿಲ್ಲ ಎಂದರು.

ಗ್ಯಾಸ್‌ ಬೆಲೆಯನ್ನು ಒಂದೇ ಬಾರಿ 140 ರೂ.ಗಳವರೆಗೆ ಏರಿಸಲಾಗಿದೆ. ಈ ಬಗ್ಗೆ ಆಯ್ಕೆಯಾದ ಜನಪ್ರತಿನಿಧಿಗಳು ಧ್ವನಿ ಎತ್ತುತ್ತಿಲ್ಲ. ಪ್ರಕರಣಗಳನ್ನು ಎದುರಿಸುತ್ತಿರುವವರನ್ನು ಸಚಿವರನ್ನಾಗಿ ಮಾಡಲಾಗಿದೆ. ಸಚಿವರ ಮಕ್ಕಳು ಮಾಡಿದ ಆಕ್ಸಿಡೆಂಟ್‌ನಂತಹ ಪ್ರಕರಣಗಳಿಗೆ ಯಾವುದೇ ಶಿಕ್ಷೆ ನೀಡುತ್ತಿಲ್ಲ. ಅಧಿಕಾರಿಗಳು ಕೂಡ ಅವರ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ನಾಯಕರಾದ ಬಿ.ನರಸಿಂಹ ಮೂರ್ತಿ, ಭಾಸ್ಕರ ರಾವ್‌ ಕಿದಿಯೂರು, ಉಪೇಂದ್ರ ಮೆಂಡನ್‌, ಕಿಶನ್‌ ಹೆಗ್ಡೆ ಕೊಳ್ಕೆಬೈಲು, ಹರೀಶ್‌ ಶೆಟ್ಟಿ ಪಾಂಗಾಳ, ಅಣ್ಣಯ್ಯ ಸೇರಿಗಾರ್‌, ಸತೀಶ್‌ ಅಮೀನ್‌ ಪಡುಕರೆ, ರೋಶನಿ ಒಲಿವೆರಾ, ಗೀತಾ ವಾಗೆÛ, ಡಾ| ಸುನೀತಾ ಶೆಟ್ಟಿ, ಪ್ರಖ್ಯಾತ್‌ ಶೆಟ್ಟಿ, ರಮೇಶ್‌ ಕಾಂಚನ್‌, ಕೇಶವ ಕೋಟ್ಯಾನ್‌, ಅನಂತ ನಾಯಕ್‌, ವಿಲಿಯಂ ಮಾರ್ಟಿಸ್‌, ಲೂವಿಸ್‌ ಲೋಬೋ, ಗಣೇಶ್‌ ನೆರ್ಗಿ, ಇಸ್ಮಾಯಿಲ್‌ ಆತ್ರಾಡಿ, ಹರೀಶ್‌ ಶೆಟ್ಟಿ, ಹಬೀಬ್‌ ಆಲಿ, ತಾರಾನಾಥ ಕಿದಿಯೂರು, ಜ್ಯೋತಿ ಹೆಬ್ಟಾರ್‌, ಯತೀಶ್‌ ಕರ್ಕೇರ, ರಾಜೇಶ್‌ ನಾಯಕ್‌, ರವೀನ್‌ಚಂದ್ರ ಶೆಟ್ಟಿ, ಆಕಾಶ್‌ ರಾವ್‌, ನವೀನ್‌ ಚಂದ್ರ, ಮಹಾಬಲ ಕುಂದರ್‌, ಪ್ರಕಾಶ್‌, ನಾರಾಯಣ ಕುಂದರ್‌, ನೀರೆ ಕೃಷ್ಣ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ, ವಿಶ್ವಾಸ್‌ ಅಮೀನ್‌, ಶಬೀರ್‌ ಅಹಮ್ಮದ್‌, ಹರೀಶ್‌ ಕಿಣಿ, ವಾಸುದೇವ, ಗಣೇಶ್‌ರಾಜ್‌ ಸರಳೇಬೆಟ್ಟು, ಉಮೇಶ್‌ ಶೆಟ್ಟಿ, ಯುವರಾಜ್‌, ಯತೀಶ್‌ ಕರ್ಕೇರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

7 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

10 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

13 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

14 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

14 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

14 hours ago