ಬೆಂಗಳೂರು, : “ದೇಶದಲ್ಲಿ ಎಲ್ಲೆಡೆ ಒಂದೇ ಕಾಲದಲ್ಲಿ ಲಸಿಕೆ ಬಿಡುಗಡೆಯಾಗಿದೆ. ಇಂದು ಐತಿಹಾಸಿಕ ಲಸಿಕಾ ಆಂದೋಲನದ ದಿನವಾಗಿದೆ” ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು, “243 ಕಡೆಗಳಲ್ಲಿ ಏಕಕಾಲಕ್ಕೆ ಲಸಿಕೆ ನೀಡುವ ಕೆಲಸ ಪ್ರಾರಂಭವಾಗಲಿದೆ. ಸುಮಾರು 24,300 ಮಂದಿಗೆ ಒಂದೇ ಜಾಗದಲ್ಲಿ ಲಸಿಕೆ ನೀಡಲಾಗುತ್ತದೆ. ಪ್ರತಿಯೋರ್ವರು ಕೂಡಾ ಸಂಪೂರ್ಣ ವಿಶ್ವಾಸದಿಂದ ಲಸಿಕೆ ತೆಗೆದುಕೊಂಡು, ಆರೋಗ್ಯ ಕಾಪಾಡಿಕೊಳ್ಳಿ. ಕೊರೊನಾ ವೈರಸ್‌ನಿಂದ ಶಾಶ್ವತವಾದ ಪರಿಹಾರ ಸಿಗುತ್ತದೆ. ನಮ್ಮ ದೇಶದ ವಿಜ್ಞಾನಿಗಳು ಲಸಿಕೆ ಕಂಡುಹಿಡಿದಿರುವುದು ನಮ್ಮ ದೇಶದ ಹೆಮ್ಮೆಯಾಗಿದೆ” ಎಂದರು.
“ಇಷ್ಟು ಬೇಗ ನಮ್ಮ ವಿಜ್ಞಾನಿಗಳು ಕೊರೊನಾ ಲಸಿಕೆ ಕಂಡುಹಿಡಿಯುತ್ತಾರೆ ಎಂದು ನಾನು ಭಾವಿಸಿರಲಿಲ್ಲ. ಕೆಲವೊಂದು ವೈರಸ್‌ಗಳಿಗೆ ವ್ಯಾಕ್ಸಿನ್ ಕಂಡುಹಿಡಿಯಲು ಸುಮಾರು 9-25 ವರ್ಷ ತೆಗೆದುಕೊಂಡರೂ ಕೂಡಾ ಸಾಧ್ಯವಾಗುತ್ತಿರಲಿಲ್ಲ. ಆದರೆ, ಒಂದು ವರ್ಷದೊಳಗೆ ಕೊರೊನಾಗೆ ಲಸಿಕೆ ಕಂಡುಹಿಡಿದಿರುವುದು ಹೆಮ್ಮೆಯ ವಿಚಾರ” ಎಂದು ಹೇಳಿದರು.
http://ರಾಜ್ಯದಲ್ಲಿ ಕೊರೋನಾ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಯಡಿಯೂರಪ್ಪ -Vishwanews24
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…