ನವದೆಹಲಿ, : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ಪ್ರಕಾರವಾಗಿ ಭಾರತವು ಶನಿವಾರ 25,152 ಹೊಸ ಕೊರೊನಾ ಸೋಂಕು ಪ್ರಕರಣಗಳನ್ನು ಹಾಗೂ 347 ಕೊರೊನಾ ಸಾವನ್ನು ದಾಖಲಿಸಿಕೊಂಡಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಒಂದು ಕೋಟಿ ದಾಟಿದ್ದು ದೇಶದಲ್ಲಿ ಒಟ್ಟು 1,00,04,599 ಜನರಿಗೆ ಸೋಂಕು ದೃಢಪಟ್ಟಿದೆ. ಈವರೆಗೆ 1,45,136 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಐದು ತಿಂಗಳುಗಳಲ್ಲಿ 10 ಲಕ್ಷ ಕೊರೊನಾ ಪ್ರಕರಣಗಳು ದಾಖಲಾಗಿದ್ದು ಆಗಸ್ಟ್‌ನಿಂದ ಅಕ್ಟೋಬರ್‌ವರೆಗಿನ ಮೂರು ತಿಂಗಳಲ್ಲೇ 60 ಲಕ್ಷಕ್ಕೆ ಕೊರೊನಾ ಪ್ರಕರಣಗಳು ಏರಿಕೆಯಾಗಿದೆ.
ನವೆಂಬರ್ 9 ರಂದು ಒಂದು ಕೋಟಿ ಕೊರೊನಾ ಪ್ರಕರಣವನ್ನು ದಾಖಲಿಸಿಕೊಂಡಿರುವ ಅಮೇರಿಕಾದ ಬಳಿಕ ಭಾರತವು ಈ ವರ್ಷದ ಆಗಸ್ಟ್‌ನಿಂದ ವಿಶ್ವದಲ್ಲೇ ಎರಡನೇ ಅತಿ ಹೆಚ್ಚು ಕೊರೊನಾ ಪ್ರಕರಣಗಳನ್ನು ದಾಖಲಿಸಿಕೊಂಡಿರುವ ದೇಶವಾಗಿದೆ.
ಇನ್ನು ಏತನ್ಮಧ್ಯೆ ಹೊಸ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು ಚೇತರಿಕೆ ಪ್ರಮಾಣವು 95.46 ಶೇಕಡ ಹಾಗೂ ಸಾವಿನ ಪ್ರಮಾಣವು 1.45 ಶೇಕಡವಾಗಿದೆ. ಕಳೆದ 12 ದಿನಗಳಿಂದ ಸಕ್ರಿಯ ಪ್ರಕರಣಗಳು ನಾಲ್ಕು ಲಕ್ಷಕ್ಕಿಂತ ಕಡಿಮೆಯಿದೆ. ಜಾಗತಿಕವಾಗಿ ಅತೀ ಹೆಚ್ಚು ಚೇತರಿಕೆ ಪ್ರಮಾಣ ಹೊಂದಿರುವ ದೇಶಗಳ ಪೈಕಿ ಒಂದಾಗಿದೆ.
ಆರೋಗ್ಯ ಸಚಿವಾಲಯದ ಪ್ರಕಾರ, ಸಕ್ರಿಯ ಪ್ರಕರಣಗಳು ಮತ್ತು ಚೇತರಿಸಿಕೊಂಡ ಪ್ರಕರಣಗಳ ನಡುವಿನ ಅಂತರವು ನಿರಂತರವಾಗಿ ಅಧಿಕಾವಾಗುತ್ತಿದೆ. ಈವರೆಗೆ 95,50,712 ಜನರು ಗುಣಮುಖರಾಗಿದ್ದರೆ, 3,08,751 ಜನರು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 16,00,90,514 ಮಾದರಿಗಳನ್ನು ಪರೀಕ್ಷಿಸಲಾಗಿದೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…