Featured

ದೇಶದಲ್ಲಿ ಒತ್ತಾಯದಿಂದ ಯಾರಿಗೂ ಲಸಿಕೆ ನೀಡುವುದಿಲ್ಲ : ಸುಪ್ರೀಂಗೆ ಕೇಂದ್ರ ಸರ್ಕಾರ – VIshwanews24

ದೇಶದಲ್ಲಿ ಒತ್ತಾಯದಿಂದ ಯಾರಿಗೂ ಲಸಿಕೆ ನೀಡುವುದಿಲ್ಲ : ಕೇಂದ್ರ ಸರ್ಕಾರ – VIshwanews24

ನವದೆಹಲಿ : ದೇಶದಲ್ಲಿ ಕೊರೊನಾ ಲಸಿಕಾ ಅಭಿಯಾನ ಒಂದು ವರ್ಷ ಕಳೆದಿದ್ದು, ಹೈಕೋರ್ಟ್ ಗಳು ಕಡ್ಡಾಯ ಲಸಿಕೆ ವಿರೋಧಿಸಿ ಸಲ್ಲಿಕೆಯಾದ ಪಿಐಎಲ್ ಗಳನ್ನು ತಿರಸ್ಕರಿಸುತ್ತಿರುವ ಬೆನ್ನಲ್ಲೆ ಕೇಂದ್ರ ಸರಕಾರ ಸುಪ್ರೀಂ ಕೋರ್ಟ್ ಗೆ ದೇಶದಲ್ಲಿ ಒತ್ತಾಯದಿಂದ ಯಾರಿಗೂ ಲಸಿಕೆ ನೀಡುವುದಿಲ್ಲ. ಅಂತಹ ಯಾವುದೇ ಸೂಚನೆಯನ್ನು ಕೇಂದ್ರ ಸರ್ಕಾರ ಅಥವಾ ಆರೋಗ್ಯ ಸಚಿವಾಲಯ ಹೊರಡಿಸಿಲ್ಲ ಎಂದು ತಿಳಿಸಿದೆ.

ಲಸಿಕೆ ಪಡೆಯುವುದನ್ನು ಕಡ್ಡಾಯ ಮಾಡಲಾಗುತ್ತಿದೆ ಮತ್ತು ಮನೆ ಮನೆಗೆ ತೆರಳಿ ಲಸಿಕೆ ನೀಡಲಾಗುತ್ತಿದೆ ಎಂದು ಇವಾರ ಫೌಂಡೇಶನ್ ಎಂಬ ಎನ್‌ಜಿಒ ಒಂದು ಸಲ್ಲಿಸಿದ್ದ ಅರ್ಜಿಗೆ ಕೇಂದ್ರ ಸರ್ಕಾರ ಈ ಉತ್ತರ ನೀಡಿದೆ.

ಲಸಿಕೆ ನೀಡುವುದು ಮತ್ತು ಲಸಿಕೆ ಪಡೆದ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸುವ ಕ್ರಮವನ್ನು ಎಲ್ಲಿಯೂ ಜಾರಿಗೆ ತಂದಿಲ್ಲ. ಜನರ ಹಿತಾಸಕ್ತಿಯಿಂದ ಮತ್ತು ಕೊರೊನಾ ಸೋಂಕು ಎಲ್ಲೆಡೆ ಹರಡುವುದನ್ನು ತಪ್ಪಿಸಲು ಲಸಿಕೆ ಪಡೆಯುವುದು ಮತ್ತು ಲಸಿಕೆ ಪ್ರಮಾಣಪತ್ರ ಹೊಂದಿರುವುದನ್ನು ಆರೋಗ್ಯ ಸಚಿವಾಲಯ ಅಭಿಯಾನ ಕೈಗೊಂಡಿದೆ. ಆದರೆ ಒತ್ತಾಯದಿಂದ ಯಾರ ಮೇಲೂ ಅದನ್ನೂ ಹೇರಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

Vishwa News 24

Recent Posts

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

32 minutes ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

45 minutes ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

50 minutes ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

1 hour ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

2 hours ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago