ಬೆಂಗಳೂರು: ನಾವು ದೇಶದಲ್ಲಿ ಮೋದಿಯವರ ನಾಯಕತ್ವ, ರಾಜ್ಯದಲ್ಲಿ ಯಡಿಯೂರಪ್ಪ ಅವರ ಸ್ಥಿರ ಸರ್ಕಾರವನ್ನು ಬೆಂಬಲಿಸಲು ಬಂದಿದ್ದೇವೆ ಎಂದು ಬಿಜೆಪಿಗೆ ಸೇರ್ಪಡೆಯಾದ ಚಿಕ್ಕಬಳ್ಳಾಪುರದ ಮಾಜಿ ಶಾಸಕ ಕೆ ಸುಧಾಕರ್ ಹೇಳಿದ್ದಾರೆ.
ಬಿಜೆಪಿ ಸೇರ್ಪಡೆ ನಂತರ ಮಾತನಾಡಿದ ಡಾ.ಕೆ ಸುಧಾಕರ್, ಈ ಹಿಂದೆ ರಾಜ್ಯದಲ್ಲಿ ಬಿಜೆಪಿಯನ್ನು ದೂರ ಇಡುವ ಏಕೈಕ ಉದ್ದೇಶದಿಂದ ಮೈತ್ರಿ ಮಾಡಿಕೊಳ್ಳಲಾಯಿತು. ಹೀಗಾಗಿ ನಮ್ಮ ಮನಸ್ಸುಗಳು ಒಗ್ಗೂಡಲೇಯಿಲ್ಲ. ಈಗ ಮೈತ್ರಿ ಸರ್ಕಾರ ಪತನವಾದ ಮೇಲೆ ಎರಡೂ ಪಕ್ಷಗಳ ನಾಯಕರು ಬೀದಿಯಲ್ಲಿ ವ್ಯಾಜ್ಯ ಮಾಡುತ್ತಿದ್ದಾರೆ ಎಂದರು.
ನಾವೆಲ್ಲಾ ಯಾರದೋ ಕೃಪೆಯಿಂದ ಗೆದ್ದವರಲ್ಲ. ಜನರ ಬೆಂಬಲ ಹಾಗೂ ಸ್ವಯಂ ಕೃಷಿಯಿದೆ. ನಮಗೆ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ. ಹೀಗಾಗಿ ಕುರ್ಚಿ ಇದ್ದರೆಷ್ಟು ಇಲ್ಲದಿದ್ದರೆಷ್ಟು. ನಾವು ಒಳ್ಳೆಯ ಉದ್ದೇಶಕ್ಕೆ ಬಿಜೆಪಿಯನ್ನು ಸೇರಿದ್ದೇವೆ ಎಂದು ಅಭಿಪ್ರಾಯಪಟ್ಟರು.
ಈ ದೇಶದಲ್ಲಿ ರಮೇಶ್ ಕುಮಾರ್ ಅವರಂತಹ ಸ್ಪೀಕರ್ ಭವಿಷ್ಯದಲ್ಲಿ ಯಾರೂ ಬರಬಾರದು. ಈ ಸರ್ಕಾರದ ಭವಿಷ್ಯ ಚುನಾವಣೆಯ ಫಲಿತಾಂಶದ ಮೇಲೆ ನಿಂತಿದೆ. ಇನ್ನೂ ಮೂರು ವರ್ಷ ಸ್ಥಿರ ಸರ್ಕಾರ ನಡೆದು ದೇಶದಲ್ಲಿ ಕರ್ನಾಟಕ ನಂಬರ್ ಒನ್ ಮಾಡಲು ಹಾಗೂ ದಕ್ಷಿಣ ದ ಇತರ ರಾಜ್ಯಗಳಿಗೆ ಬಿಜೆಪಿ ವಿಸ್ತರಿಸಲು ಎಲ್ಲರೂ ಶ್ರಮಿಸಬೇಕು ಎಂದರು.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…