ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸಂವಿಧಾನ, ಸ್ವಾತಂತ್ರ್ಯದ ಹೆಸರಿನಲ್ಲಿ ಗೊಂದಲ ಸೃಷ್ಟಿಸುತ್ತಿದೆ. ಮಲ್ಲಿಕಾರ್ಜುನ ಖರ್ಗೆಯಂತಹ ಹಿರಿಯರು ಕೂಡ ಸಂವಿಧಾನಕ್ಕೆ ಧಕ್ಕೆಯಾಗಿದೆ ಎಂದು ಮಾತನಾಡುತ್ತಾರೆ. ಸಂವಿಧಾನದ ತಿದ್ದು ಮಾಡಿದ್ದು, ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿ ಸಂವಿಧಾನಕ್ಕೆ ಧಕ್ಕೆ ತಂದಿರುವುದು ಕಾಂಗ್ರೆಸ್ ಪಕ್ಷ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಮಂಗಳೂರಿನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಟಲ್ ಬಿಹಾರಿ ವಾಜಪೇಯಿ, ಅಡ್ವಾಣಿಯಂತಹ ಹಿರಿಯ ನಾಯಕರನ್ನು ಜೈಲಿಗೆ ಹಾಕಿದ ಕಾಂಗ್ರೆಸ್ ಪಕ್ಷಕ್ಕೆ ಸಂವಿಧಾನಕ್ಕೆ ಧಕ್ಕೆಯಾಗಿದೆ ಎಂದು ಹೇಳುವ ಹಕ್ಕಿಲ್ಲ. ಡಾ. ಬಿ.ಆರ್. ಅಂಬೇಡ್ಕರ್ ಅವರ ಸ್ಮಶಾನ ನಿರ್ಮಾಣಕ್ಕೆ ಕಾಂಗ್ರೆಸ್ ಹೊಸದಿಲ್ಲಿಯಲ್ಲಿ 10 ಅಡಿ ಜಾಗ ನೀಡಲಿಲ್ಲ. ರಾಜಕೀಯ ಬೇಳೆ ಬೇಯಿಸಲು ಅಂಬೇಡ್ಕರ್ ಅವರ ಹೆಸರು ಬಳಕೆ ಮಾಡುತ್ತಿದ್ದಾರೆ ಎಂದರು.
ಬೆಂಗಳೂರಿನಲ್ಲಿ ಇತ್ತೀಚೆಗೆ ಸಂವಿಧಾನದ ಬಗ್ಗೆ ಸಮಾವೇಶ ಏರ್ಪಡಿಸಿ ಸರಕಾರಿ ಕಾರ್ಯಕ್ರಮವನ್ನು ಪ್ರಧಾನಿ ಮೋದಿ ಅವರನ್ನು ನಿಂದಿಸಲು ಬಳಸಿದ್ದಾರೆ. ಕೇಂದ್ರದ ಬಗ್ಗೆ ದೂಷಣೆ ಮಾಡಲು ಜನರ ತೆರಿಗೆ ಹಣ ಖರ್ಚು ಮಾಡಿದ್ದಾರೆ ಎಂದು ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡ ಸತೀಶ್ ಕುಂಪಲ, ನಿತಿನ್ ಕುಮಾರ್, ಪ್ರೇಮಾನಂದ ಶೆಟ್ಟಿ, ಕಿಶೋರ್, ಮಂಜುಳಾ ರಾವ್, ನಂದನ್ ಮಲ್ಯ, ವಸಂತ ಪೂಜಾರಿ ಇದ್ದರು.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…