ರಾಮನಗರ: ದೇಶದಲ್ಲಿ ಬಿಜೆಪಿ ಹೊರತುಪಡಿಸಿ ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿರಬಾರದು ಎಂಬುದೇ ಬಿಜೆಪಿಗರ ಉದ್ದೇಶವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ರಾಜಕೀಯ ಅತಂತ್ರ ಸ್ಥಿತಿ ನಿರ್ಮಾಣವಾಗಲು ಬಿಜೆಪಿಯೇ ಕಾರಣ. ಅಲ್ಲಿನ ಸರ್ಕಾರ ಉರುಳಿಸಿ ಸರ್ಕಾರ ರಚನೆಗೆ ಬಿಜೆಪಿ ಭಾರೀ ಕಸರತ್ತು ನಡೆಸುತ್ತಿದೆ. ಆದರೆ ಬಾಹ್ಯವಾಗಿ ತಮಗೇನೂ ಗೊತ್ತಿಲ್ಲ ಎಂದು ಆ ಪಕ್ಷದವರು ಹೇಳಿಕೊಳ್ಳುತ್ತಿದ್ದಾರೆ. ಆದರೆ ಈ ವಿಚಾರ ಇಡೀ ದೇಶಕ್ಕೇ ಗೊತ್ತಿದೆ. ಮಹಾ ಶಾಸಕರನ್ನು ಹೈಜಾಕ್ ಮಾಡಿ ಬಿಜೆಪಿ ಸರ್ಕಾರವಿರುವ ರಾಜ್ಯದ ರೆಸಾರ್ಟ್‌ನಲ್ಲಿ ಕೂಡಿಡಲಾಗಿದೆ ಎಂದವರು ಆಪಾದಿಸಿದರು.
ದೇಶದಲ್ಲಿ ಬಿಜೆಪಿ ಬಿಟ್ಟು ಇನ್ನೊಂದು ಪಕ್ಷ ಆಡಳಿತದಲ್ಲಿರಬಾರದು ಎಂಬುದು ಆ ಪಕ್ಷದ ಉದ್ದೇಶವಾಗಿದೆ. ಕರ್ನಾಟಕದಲ್ಲಿಯೂ ಇದೇ ರೀತಿಯ ತಂತ್ರ ಹೆಣೆದು ಅಧಿಕಾರಕ್ಕೆ ಬಂದಿದ್ದರು ಎಂದವರು ಆಕ್ರೋಶ ವ್ಯಕ್ತಪಡಿಸಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…