ನವದೆಹಲಿ: ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಾ ಗಾಂಧಿಜೀಯವರಿಗೆ ಭಾರತದಲ್ಲಿ ಮದ್ಯ ನಿಷೇಧ ಮಾಡಬೇಕು ಎನ್ನುವುದು ಆಶಯವಾಗಿತ್ತು ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
ನಿನ್ನೆ (ಫೆ.16) ದೆಹಲಿಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಿತೀಶ್ ಕುಮಾರ್ ಮದ್ಯಪಾನದಿಂದಾಗುವ ತೊಂದರೆಗಳ ಕುರಿತಾಗಿ ಮಾತನಾಡಿದ್ದಾರೆ. ಅದರಿಂದಾಗುವ ತೊಂದರೆಗಳನ್ನು ಪರಿಗಣಿಸಿಯೇ ತಮ್ಮ ರಾಜ್ಯದಲ್ಲಿ ಮದ್ಯ ನಿಷೇಧ ಮಾಡಿರುವುದಾಗಿ ತಿಳಿಸಿರುವ ಅವರು ಇಡೀ ದೇಶದಲ್ಲಿಯೇ ಮದ್ಯ ನಿಷೇಧವಾಗಬೇಕು ಎಂದು ಹೇಳಿದ್ದಾರೆ. ಪೂರ್ತಿ ಭಾರತದಲ್ಲಿ ಮದ್ಯ ನಿಷೇಧ ಮಾಡಬೇಕೆನ್ನುವುದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಆಶಯ ಕೂಡ ಆಗಿತ್ತು ಎಂದು ತಿಳಿಸಿದ್ದಾರೆ.
ಈ ಹಿಂದೆಯೇ ನಮ್ಮ ರಾಜ್ಯದಲ್ಲಿ ಮದ್ಯ ನಿಷೇಧ ಮಾಡುವ ಪ್ರಯತ್ನವನ್ನು ಮಾಜಿ ಮುಖ್ಯಮಂತ್ರಿಗಳು ಮಾಡಿದ್ದರು. ಆದರೆ ಅದು ಪೂರ್ಣ ಪ್ರಮಾಣದಲ್ಲಿ ಯಶಸ್ಸು ಕಂಡಿರಲಿಲ್ಲ. ನಾನು ಮದ್ಯ ನಿಷೇಧ ಮಾಡುವುದಕ್ಕೆ 2011ರಿಂದಲೇ ಪ್ರಯತ್ನಿಸಿದ್ದೇನೆ. ಅದು 2016ಕ್ಕೆ ಸಫಲವಾಯಿತು ಎಂದು ನಿತೀಶ್ ಕುಮಾರ್ ತಿಳಿಸಿದ್ದಾರೆ
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…